ನಟ ಪ್ರಕಾಶ್ ರಾಜ್‌ಗೆ ಮತ್ತೆ ಬೆಂಗಳೂರು ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿ

Date:

ಮೂರು ವಿವಿಧ ರಾಜ್ಯಗಳ ನಾಲ್ಕು ಪ್ರತ್ಯೇಕ ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ, ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ವಿರುದ್ಧ ಬೆಂಗಳೂರಿನ ನ್ಯಾಯಾಲಯವೊಂದು ಮತ್ತೆ ಜಾಮೀನು ರಹಿತ ವಾರಂಟ್ (NBW) ಜಾರಿ ಮಾಡಿದೆ.

- Advertisement -

ನಗರದ ವಕೀಲ ಕೆ. ದಿಲೀಪ್ ಕುಮಾರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಜೂನ್ 12 ರ ಈ ವಾರಂಟ್ ಅನ್ನು ಮರುಜಾರಿಗೊಳಿಸಿದೆ. ನ್ಯಾಯಾಲಯದ ಕಲಾಪಗಳ ಪ್ರಕಾರ, ಪ್ರಕಾಶ್ ರಾಜ್ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರಂಟ್ ಇದಾಗಿದೆ. ಈ ಹಿಂದೆ 2026ರ ಫೆಬ್ರವರಿ 17ರಂದು ಪೊಲೀಸ್ ಆಯುಕ್ತರ ಮೂಲಕ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ವಿಳಾಸದಲ್ಲಿ ನಟ ಇರಲಿಲ್ಲ ಎಂದು ವರದಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಹೀಗಾಗಿ ಮಾರ್ಚ್ 17ರಂದು ಮೊದಲ ವಾರಂಟ್ ಜಾರಿ ಮಾಡಿದ್ದ ನ್ಯಾಯಾಲಯ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿತ್ತು. ಅಂದೂ ಕೂಡ ನಟ ವಿಚಾರಣೆಗೆ ಗೈರಾದ ಕಾರಣ ವಾರಂಟ್ ಮರುಜಾರಿಯಾಗಿತ್ತು. ತದನಂತರ ನ್ಯಾಯಾಧೀಶರು ತರಬೇತಿಗೆ ತೆರಳಿದ್ದ ಕಾರಣವನ್ನು ಉಲ್ಲೇಖಿಸಿ ಜೂನ್ 12, 2026ರಂದು ಮೂರನೇ ಬಾರಿ ವಾರಂಟ್ ಜಾರಿ ಮಾಡಲಾಗಿದ್ದು, ಮುಂದಿನ ವಿಚಾರಣೆಯನ್ನು 2026ರ ಜುಲೈ 25ಕ್ಕೆ ನಿಗದಿಪಡಿಸಲಾಗಿದೆ.

ಪ್ರಕಾಶ್ ರಾಜ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಅವರ ಹೆಸರು ಕರ್ನಾಟಕದ ಬೆಂಗಳೂರಿನ ‘ಶಾಂತಿನಗರ’, ತಮಿಳುನಾಡಿನ ಚೆನ್ನೈನ ‘ವೇಳಚ್ಚೇರಿ’ಯ ಎರಡು ಕಡೆಗಳಲ್ಲಿ ಹಾಗೂ ತೆಲಂಗಾಣದ ‘ಶೇರಿಲಿಂಗಂಪಲ್ಲಿ’ ಸೇರಿ ಒಟ್ಟು ಮೂರು ರಾಜ್ಯಗಳ ನಾಲ್ಕು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿತ್ತು ಎಂದು ದೂರುದಾರರಾದ ದಿಲೀಪ್ ಕುಮಾರ್ 2023ರಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದರು.

ಈ ಕುರಿತು 2019ರ ಏಪ್ರಿಲ್‌ನಲ್ಲೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ದೂರುದಾರರು ನ್ಯಾಯಾಲಯದ ಮೊರೆಹೋಗಿದ್ದರು. 2025ರ ಆಗಸ್ಟ್ 1ರಂದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯವು, ‘1950ರ ಪ್ರಜಾಪ್ರಾತಿನಿಧ್ಯ ಕಾಯ್ದೆ’ಯ ಸೆಕ್ಷನ್ 31 ಮತ್ತು 125(A) ಅಡಿಯಲ್ಲಿ ಇದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿತ್ತು. ಅಂದಿನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಮನ್ಸ್ ನೀಡಿದರೂ ನಟ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಈ ಬಂಧನ ವಾರಂಟ್ ಕ್ರಮ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...