ಯಶ್‌ ಚೋಪ್ರಾ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಇನ್ನಿಲ್ಲ

Date:

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಮೇಲಾ ಚೋಪ್ರಾ

- Advertisement -

ಬೆಳಗ್ಗೆ 11 ಗಂಟೆ ಸುಮಾರಿಗೆ ನೆರವೇರಿದ ಅಂತ್ಯಕ್ರಿಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಬಾಲಿವುಡ್‌ನ ಖ್ಯಾತ ನಿರ್ದೇಶಕ, ದಿವಂಗತ ಯಶ್‌ ಚೋಪ್ರಾ ಅವರ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಚೋಪ್ರಾ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. 11 ಗಂಟೆ ಸುಮಾರಿಗೆ ಮುಂಬೈನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ ಎಂದು ಚೋಪ್ರಾ ಕುಟುಂಬದ ಆಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

74 ವರ್ಷದ ಪಮೇಲಾ ಚೋಪ್ರಾ ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಪಮೇಲಾ ಅವರ ಅಗಲಿಕೆಯೇ ಸುದ್ದಿ ತಿಳಿಯುತ್ತಿದ್ದಂತೆ ಕರಣ್‌ ಜೋಹರ್‌, ಹೃತಿಕ್‌ ರೋಶನ್‌, ರಾಕೇಶ್‌ ರೋಶನ್‌, ಸೋನು ನಿಗಮ್‌, ಅನುಪಮ್‌ ಖೇರ್‌ ಮುಂತಾದವರು ಅಂತಿಮ ದರ್ಶನ ಪಡೆದಿದ್ದಾರೆ. ಅಜಯ್‌ ದೇವಗನ್‌, ಜಾವೇದ್‌ ಅಖ್ತರ್‌, ಅನುಷ್ಕಾ ಶರ್ಮಾ ಸೇರಿದಂತೆ ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಪಮೇಲಾ ಅವರ ಅಗಲಿಕೆಗೆ ಟ್ವೀಟ್‌ ಮೂಲಕ ಕಂಬನಿ ಮಿಡಿದಿದ್ದಾರೆ.

1970ರಲ್ಲಿ ಯಶ್‌ ಚೋಪ್ರಾ ಅವರನ್ನು ವಿವಾಹವಾಗಿದ್ದ ಪಮೇಲಾ 1976ರಲ್ಲಿ ಅಮಿತಾಬ್‌ ಬಚ್ಚನ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡ ʼಕಭಿ ಕಭಿʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗುವ ಮೂಲಕ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡರು. ನಂತರದ ದಿನಗಳಲ್ಲಿ ʼದೂಸ್ರಾ ಆದ್ಮಿʼ, ʼನೂರಿʼ, ʼಕಾಲಾ ಪಥ್ಥರ್‌ʼ, ತ್ರಿಶೂಲ್‌, ʼಸಿಲ್‌ ಸಿಲಾʼ ಮುಂತಾದ ಚಿತ್ರಗಳಲ್ಲಿನ ಹಲವು ಹಾಡುಗಳಿಗೆ ಅವರು ಧ್ವನಿಯಾಗಿದ್ದರು. ಪಮೇಲಾ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದ ʼದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೆʼ ಚಿತ್ರದ ʼಘರ್‌ ಆ ಪರದೇಸಿʼ ಭಾರೀ ಜನಪ್ರಿಯತೆ ಗಳಿಸಿತ್ತು.

1993ರಲ್ಲಿ ಜಾಕಿ ಶ್ರಾಫ್‌, ಅಮೃತಾ ಸಿಂಗ್‌, ಜೂಹಿ ಚಾವ್ಲಾ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಆಯ್ನಾʼ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕಿಯಾಗಿ ಬಡ್ತಿ ಪಡೆದಿದ್ದರು. ʼಸಿಲ್‌ ಸಿಲಾʼ ಮತ್ತು ʼಸವಾಲ್‌ʼ ಚಿತ್ರಗಳಲ್ಲಿ ವಸ್ತ್ರ ವಿನ್ಯಾಸಕಿಯಾಗಿಯೂ ಪಮೇಲಾ ಕೆಲಸ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...