ಯಶ್‌ ಚೋಪ್ರಾ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಇನ್ನಿಲ್ಲ

Date:

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಮೇಲಾ ಚೋಪ್ರಾ

ಬೆಳಗ್ಗೆ 11 ಗಂಟೆ ಸುಮಾರಿಗೆ ನೆರವೇರಿದ ಅಂತ್ಯಕ್ರಿಯೆ

ಬಾಲಿವುಡ್‌ನ ಖ್ಯಾತ ನಿರ್ದೇಶಕ, ದಿವಂಗತ ಯಶ್‌ ಚೋಪ್ರಾ ಅವರ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಚೋಪ್ರಾ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. 11 ಗಂಟೆ ಸುಮಾರಿಗೆ ಮುಂಬೈನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ ಎಂದು ಚೋಪ್ರಾ ಕುಟುಂಬದ ಆಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

74 ವರ್ಷದ ಪಮೇಲಾ ಚೋಪ್ರಾ ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಪಮೇಲಾ ಅವರ ಅಗಲಿಕೆಯೇ ಸುದ್ದಿ ತಿಳಿಯುತ್ತಿದ್ದಂತೆ ಕರಣ್‌ ಜೋಹರ್‌, ಹೃತಿಕ್‌ ರೋಶನ್‌, ರಾಕೇಶ್‌ ರೋಶನ್‌, ಸೋನು ನಿಗಮ್‌, ಅನುಪಮ್‌ ಖೇರ್‌ ಮುಂತಾದವರು ಅಂತಿಮ ದರ್ಶನ ಪಡೆದಿದ್ದಾರೆ. ಅಜಯ್‌ ದೇವಗನ್‌, ಜಾವೇದ್‌ ಅಖ್ತರ್‌, ಅನುಷ್ಕಾ ಶರ್ಮಾ ಸೇರಿದಂತೆ ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಪಮೇಲಾ ಅವರ ಅಗಲಿಕೆಗೆ ಟ್ವೀಟ್‌ ಮೂಲಕ ಕಂಬನಿ ಮಿಡಿದಿದ್ದಾರೆ.

1970ರಲ್ಲಿ ಯಶ್‌ ಚೋಪ್ರಾ ಅವರನ್ನು ವಿವಾಹವಾಗಿದ್ದ ಪಮೇಲಾ 1976ರಲ್ಲಿ ಅಮಿತಾಬ್‌ ಬಚ್ಚನ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡ ʼಕಭಿ ಕಭಿʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗುವ ಮೂಲಕ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡರು. ನಂತರದ ದಿನಗಳಲ್ಲಿ ʼದೂಸ್ರಾ ಆದ್ಮಿʼ, ʼನೂರಿʼ, ʼಕಾಲಾ ಪಥ್ಥರ್‌ʼ, ತ್ರಿಶೂಲ್‌, ʼಸಿಲ್‌ ಸಿಲಾʼ ಮುಂತಾದ ಚಿತ್ರಗಳಲ್ಲಿನ ಹಲವು ಹಾಡುಗಳಿಗೆ ಅವರು ಧ್ವನಿಯಾಗಿದ್ದರು. ಪಮೇಲಾ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದ ʼದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೆʼ ಚಿತ್ರದ ʼಘರ್‌ ಆ ಪರದೇಸಿʼ ಭಾರೀ ಜನಪ್ರಿಯತೆ ಗಳಿಸಿತ್ತು.

1993ರಲ್ಲಿ ಜಾಕಿ ಶ್ರಾಫ್‌, ಅಮೃತಾ ಸಿಂಗ್‌, ಜೂಹಿ ಚಾವ್ಲಾ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಆಯ್ನಾʼ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕಿಯಾಗಿ ಬಡ್ತಿ ಪಡೆದಿದ್ದರು. ʼಸಿಲ್‌ ಸಿಲಾʼ ಮತ್ತು ʼಸವಾಲ್‌ʼ ಚಿತ್ರಗಳಲ್ಲಿ ವಸ್ತ್ರ ವಿನ್ಯಾಸಕಿಯಾಗಿಯೂ ಪಮೇಲಾ ಕೆಲಸ ಮಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...