ಕಾನ್ ಚಲನಚಿತ್ರೋತ್ಸವ: ಗ್ರ್ಯಾಂಡ್ ಪ್ರಿ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಪಾಯಲ್ ಕಪಾಡಿಯಾ

Date:

ಕಾನ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿ (Grand Prix) ಪ್ರಶಸ್ತಿ ಗೆಲ್ಲುವ ಮೂಲಕ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರು ಶನಿವಾರ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಅವರ ಸ್ಪೆಲ್‌ಬೈಂಡಿಂಗ್ ನಾಟಕ “ಆಲ್ ವಿ ಇಮ್ಯಾಜಿನ್ ಆಸ್ ಲೈಟ್” 2024ರ ಕಾನ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿಯನ್ನು ಗೆದ್ದಿದೆ.

ಗುರುವಾರ ರಾತ್ರಿ ತೆರೆಕಂಡ ಎಂಎಸ್ ಕಪಾಡಿಯಾ ಅವರ ಚೊಚ್ಚಲ ನಿರ್ದೇಶನದ ಚಿತ್ರವು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ. 30 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತೀಯ ಚಲನಚಿತ್ರಕ್ಕೆ ಕಾನ್‌ನಲ್ಲಿ ಗ್ರ್ಯಾಂಡ್ ಪ್ರಿ ಪ್ರಶಸ್ತಿ ಲಭಿಸಿದೆ. ಜೊತೆಗೆ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಭಾರತೀಯ ಮಹಿಳಾ ನಿರ್ದೇಶಕರ ಸಿನಿಮಾ ಪ್ರದರ್ಶನಗೊಂಡಿದೆ.

ಈ ಚಲನಚಿತ್ರ ಪ್ರದರ್ಶನಗೊಂಡ ಬಳಿಕ ಪ್ರೇಕ್ಷಕರ ಚಪ್ಪಾಳೆಯ ಸುರಿಮಳೆ ಸುರಿದಿದೆ. ಸುಮಾರು ಎಂಟು ನಿಮಿಷಗಳ ಕಾಲ ಪ್ರೇಕ್ಷಕರು ನಿಂತು ಚಪ್ಪಾಳೆ ತಟ್ಟಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

“ಆಲ್ ವಿ ಇಮ್ಯಾಜಿನ್ ಆಸ್ ಲೈಟ್”, ಮಲಯಾಳಂ-ಹಿಂದಿ ಫೀಚರ್ ಸಿನಿಮಾವಾಗಿದ್ದು, ಅಂತರಾಷ್ಟ್ರೀಯ ವಿಮರ್ಶಕರು ಚಿತ್ರವನ್ನು ಹಾಡಿಹೊಗಳಿದ್ದಾರೆ. ಪಾಯಲ್ ಕಪಾಡಿಯಾ ಅವರ ಕಥೆ ಹೇಳುವ ರೀತಿಯನ್ನು ಶ್ಲಾಘಿಸಿದ್ದಾರೆ.

ಪ್ರಶಸ್ತಿ ಗೆದ್ದ ಭಾರತೀಯ ನಟಿ

ಇನ್ನು ಈ ವಿಶ್ವ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ‘ದಿ ಶೇಮ್‌ಲೆಸ್‌’ನಲ್ಲಿ (The Shameless) ಅನಸೂಯಾ ಅವರ ಅಭಿನಯ ಗಮನ ಸೆಳೆದಿದೆ. ಇದನ್ನು ಬಲ್ಗೇರಿಯನ್ ನಿರ್ದೇಶಕ ಕಾನ್‌ಸ್ಟಾಂಟಿನ್ ಬೊಜಾನೋವ್ ಬರೆದು ನಿರ್ದೇಶಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಆರೋಪಿ ನಟ ದರ್ಶನ್...

ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದೀಪ್ ಮಾತು

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಆತನ ತಂಡ ಬರ್ಬರವಾಗಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಮರಣೋತ್ತರ ಪರೀಕ್ಷೆಯಲ್ಲಿ ದೇಹದ 15 ಕಡೆಗಳಲ್ಲಿ ಗಾಯದ ಗುರುತು

ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಿತ್ರನಟ ದರ್ಶನ್ ಮತ್ತು ತಂಡದಿಂದ ಇತ್ತೀಚೆಗೆ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ...