ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

Date:

ಅದ್ದೂರಿ ಮೇಕಿಂಗ್‌ನಿಂದಲೇ ನಿರೀಕ್ಷೆ ಹೆಚ್ಚಿಸಿರುವ ʼಸಲಾರ್‌ʼ

- Advertisement -

ಕನ್ನಡಿಗ ಪ್ರಶಾಂತ್‌ ನೀಲ್‌ ನಿರ್ದೇಶನದ ಸಿನಿಮಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಮತ್ತು ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ʼಸಲಾರ್‌ʼ ಸಿನಿಮಾದ ಬಿಡುಗಡೆ ದಿನಾಂಕ ಬುಧವಾರ ಘೋಷಣೆಯಾಗಿದೆ.

ಚಿತ್ರಕ್ಕೆ ಬಂಡವಾಳ ಹೂಡಿರುವ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆ ʼಹೊಂಬಾಳೆ ಫಿಲಂಸ್‌ʼ ಟ್ವಿಟರ್‌ನಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದು, “ಸದ್ಯದಲ್ಲೇ ಕಡು ಕ್ರೂರಿ ನಿಮ್ಮ ಮುಂದೆ ಬರಲಿದ್ದಾನೆ. ಮುಂಬರುವ ಸೆಪ್ಟೆಂಬರ್‌ 28ರಂದು ಸಲಾರ್‌ ಸಿನಿಮಾ ತೆರೆಗೆ ಬರಲಿದೆ” ಎಂದು ಮಾಹಿತಿ ನೀಡಿದೆ.

ಫಸ್ಟ್‌ಲುಕ್‌ ಪೋಸ್ಟರ್‌ ಮತ್ತು ಅದ್ದೂರಿ ಮೇಕಿಂಗ್‌ನಿಂದಲೇ ನಿರೀಕ್ಷೆ ಹೆಚ್ಚಿಸಿರುವ ʼಸಲಾರ್‌ʼ ಸಿನಿಮಾದಲ್ಲಿ ಬಹುಭಾಷಾ ನಟಿ ಶೃತಿ ಹಾಸನ್‌, ಪ್ರಭಾಸ್‌ಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್‌ ಸುಕುಮಾರನ್‌, ಜಗಪತಿ ಬಾಬು, ಶ್ರೇಯಾ ರೆಡ್ಡಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರಕ್ಕೆ ಕೆಜಿಎಫ್‌ ಖ್ಯಾತಿಯ ರವಿ ಬಸ್ರೂರ್‌ ಸಂಗೀತ ನಿರ್ದೇಶನ ಮಾಡಿದ್ದಾರೆ.

ʼಬಾಹುಬಲಿ-2ʼ ಬಳಿಕ ಪ್ರಭಾಸ್‌ ನಟಿಸಿದ್ದ ʼಸಾಹೋʼ ಮತ್ತು ʼರಾಧೆ ಶ್ಯಾಮ್‌ʼ ಸಿನಿಮಾಗಳು ಸೋಲನುಭವಿಸಿದ್ದವು. ಸದ್ಯ ತೆರೆಗೆ ಸಜ್ಜಾಗಿರುವ ʼಆದಿಪುರುಷ್‌ʼ ಸಿನಿಮಾದ ಟೀಸರ್‌ ಕೂಡ ಸಿನಿ ರಸಿಕರಿಂದ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆ ʼಸಲಾರ್‌ʼ ಸಿನಿಮಾ ಬಹಳಷ್ಟು ಮಹತ್ವ ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...