ತಮ್ಮನ ಚಿತ್ರಕ್ಕೆ ಪ್ರಜ್ವಲ್‌ ದೇವರಾಜ್‌ ಪ್ರೊಡ್ಯೂಸರ್;‌ ಚಿತ್ರದ ಫರ್ಸ್ಟ್‌ ‌ಲುಕ್ ರಿಲೀಸ್

Date:

ಸ್ಯಾಂಡಲ್‌ವುಡ್‌ ಡೈನಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್ ಮೊದಲ ಬಾರಿಗೆ ಪ್ರೊಡ್ಯೂಸರ್‌ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸದ್ಯ ಸಹೋದರ ಪ್ರಣಮ್‌ ದೇವರಾಜ್‌ ಚಿತ್ರದ ನಾಯಕನಾಗಿದ್ದು, ಚಿತ್ರದ ಫರ್ಸ್ಟ್‌ ಲುಕ್‌ ರಿಲೀಸ್‌ ಆಗಿದೆ.

- Advertisement -

ಡೈನಮಿಕ್‌ ವೆಂಚರ್ಸ್‌ ಹಾಗೂ ಪುರಾತನ ಫಿಲಂಸ್ ಪ್ರೊಡಕ್ಷನ್‌ ಸಹಯೋಗದಲ್ಲಿ ಚಿತ್ರ ಮೂಡಿಬರಲಿದೆ. ಎಂಜಿಆರ್‌ ಚಿತ್ರದ ಶೀರ್ಷಿಕೆ. ನಾಯಕ ಪ್ರಣಮ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್‌ ಹಾಗೂ ರಗಡ್‌ ಲುಕ್‌ನ ಪೋಸ್ಟರ್‌ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದೊಂದು ಸಂತಸದ ಕ್ಷಣ. ನಾನು ಚಿತ್ರರಂಗಕ್ಕೆ ಬಂದು 30 ವರ್ಷಗಳ ಬಳಿಕ ನಿರ್ಮಾಪಕನಾದೆ. ಈಗ ನನ್ನ ಮಗ ನಿರ್ಮಾಪಕನ ಜವಾಬ್ದಾರಿ ಹೊತ್ತಿದ್ದಾನೆ. ನಮಗೆ ಸಿನಿಮಾ ಬಿಟ್ಟು ಬೇರೇನೂ ಗೊತ್ತಿಲ್ಲ. ಇದರಲ್ಲೇ ಏನಾದರೂ ಮಾಡಬೇಕೆಂಬ ಆಸೆಯಿರುತ್ತದೆ. ಪುರಾತನ ಫಿಲಂಸ್‌ನವರು ಮಗನ ಜೊತೆ ಎರಡನೇ ಸಿನಿಮಾ ಮಾಡ್ತಿದಾರೆ. ನನಗೆ ಇಷ್ಟವಾದ ಚರಣ್‌ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಬಹುತೇಕರು ನಮ್ಮನ್ನು ಅರ್ಥಮಾಡಿಕೊಂಡವರೇ ಚಿತ್ರದ ಕೆಲಸ ಮಾಡಿದ್ದಾರೆ. ಇದು ಒಂದು ರೀತಿಯ ಖುಷಿ ತಂದಿದೆ. ಚಿತ್ರಕ್ಕೆ ಶುಭವಾಗಲಿ ಎಂದರು ಹಿರಿಯ ನಟ ದೇವರಾಜ್.‌

image 2026 01 29T191629.289

ನಿರ್ದೇಶಕ ಶ್ರೀಕಾಂತ್‌ ಹುಣಸೂರು ಮಾತನಾಡಿ, ಪ್ರಣಂ ಜೊತೆ ಮುತ್ತಣ್ಣ ಬಳಿಕ ಇದು ಎರಡನೇ ಚಿತ್ರ. ಅವರನ್ನು ವಿಭಿನ್ನ ರೀತಿಯಲ್ಲಿ ತೋರಿಸಲು ಪ್ರಯತ್ನಿಸಿದ್ದೇನೆ. ಚಿತ್ರದ ಟೈಟಲ್‌ ಸಮಸ್ಯೆಯಾಗಬಹುದು, ಆದರೆ ಕಾನ್ಸೆಪ್ಟ್‌ ಬಹಳ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಎಂಜಿಆರ್‌ ಎಂದರೇನು ಎಂದು ತಿಳಿಸುತ್ತೇವೆ. 2005ರಲ್ಲಿ ನಡೆದ ಕಥೆಯಾಧರಿಸಿ ಚಿತ್ರ ತಯಾರಾಗಲಿದೆ. ಮಾರ್ಚ್‌ ಎಂಡ್‌ ಅಥವಾ ಯುಗಾದಿ ವೇಳೆಗೆ ಚಿತ್ರದ ಮುಹೂರ್ತ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರು | ಜ.29ರಂದು ‘ಗೌರಿ ದಿನ’ ಕಾರ್ಯಕ್ರಮ; ನಟ ದುನಿಯಾ ವಿಜಯ್ ಭಾಗಿ!

ಸ್ಕೇಟಿಂಗ್‌ ಕೃಷ್ಣ ಅವರ ಛಾಯಾಗ್ರಹಣ ಹಾಗೂ ಚರಣ್‌ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿರಲಿದೆ. ತಂಡ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...