ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

Date:

  • ರಾಹುಲ್‌ ಗಾಂಧಿ ಅನರ್ಹತೆ ವಿರೋಧಿಸಿದ್ದ ಪ್ರಕಾಶ್‌ ರಾಜ್‌
  • ಇಡೀ ಭಾರತವೇ ನಿಮ್ಮ ಮನೆ ಎಂದ ಬಹುಭಾಷಾ ನಟ

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಮ್ಮ ಮನೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಜಾಮೀನು ನೀಡಿದ ಬಳಿಕ ಲೋಕಸಭಾ ಸಚಿವಾಲಯ ಅವರನ್ನು ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿತ್ತು. ಇದಾದ ಕೆಲ ದಿನಕ್ಕೆ ರಾಹುಲ್‌ ಗಾಂಧಿ ವಾಸವಿದ್ದ ದೆಹಲಿಯ ತುಘಲಕ್‌ ರಸ್ತೆಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸಚಿವಾಲಯ ಸೂಚಿಸಿತ್ತು. ಮಾರ್ಚ್‌ 28ರಂದು ಸಚಿವಾಲಯದ ಉಪ ಕಾರ್ಯದರ್ಶಿ ಮೋಹಿತ್‌ ರಾಜನ್‌ ಅವರಿಗೆ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್‌, ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದಾಗಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಲೋಕಸಭೆಯ ಉಪ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್‌ ರಾಜ್‌, “ಪ್ರೀತಿಯ ರಾಹುಲ್‌ ಗಾಂಧಿ, ಈ ಸರ್ವಾಧಿಕಾರಿಗಳಿಂದ ದೇಶವನ್ನು ಕಾಪಾಡಲು ಪಣ ತೊಟ್ಟಿರುವ ಪ್ರತಿಯೊಬ್ಬರ ಮನೆಯೂ ನಿಮ್ಮದೇ. ಭಾರತ ನಿಮ್ಮ ಮನೆ, ನಿಮಗೆ ನನ್ನ ಮನೆಗೆ ಆದರದ ಸ್ವಾಗತ ಕೋರುತ್ತೇನೆ. ಇನ್ನು ಹೆಚ್ಚಿನ ಶಕ್ತಿ ನಿಮ್ಮದಾಗಲಿ” ಎಂದು ಹಾರೈಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೊರಳಿಗೆ ಲಕ್ಷ್ಮಿದೇವಿ ಹಾರ ಧರಿಸಿದ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿಯವರನ್ನು ಅನರ್ಹತೆಗೊಳಿಸಿದ ಸಂದರ್ಭದಲ್ಲೂ ಪ್ರತಿಕ್ರಿಯಿಸಿದ್ದ ಪ್ರಕಾಶ್‌ ರಾಜ್‌, “ಈ ರೀತಿ ಕೀಳುಮಟ್ಟದ, ಪ್ರಗತಿಗೆ ಮಾರಕವಾಗುಂತಹ ರಾಜನೀತಿ ಮಾಡಲು‌ ನಾಚಿಕೆಯಾಗಬೇಕು. ಇದು ದೇಶಕ್ಕಾಗಿ ನಾವೆಲ್ಲರೂ ಧ್ವನಿ ಎತ್ತಬೇಕಿರುವ ಸಂದರ್ಭ. ಇಂತಹ ಹೊತ್ತಿನಲ್ಲಿ ನಾವು ಸುಮ್ಮನೆ ಕೂತರೆ, ಇವತ್ತಿನ ನಮ್ಮ ಮೌನಕ್ಕೆ ನಾಳೆ ದಿನ ನಾವೇ ದುಬಾರಿ ಬೆಲೆ ತೆರಬೇಕಾಗುತ್ತದೆ” ಎಂದು ಜನಸಾಮಾನ್ಯರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...