ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಸೆ.12ಕ್ಕೆ ತೆರೆಗೆ

Date:

ಪುರಾತನ ಫಿಲಂಸ್ ನಿರ್ಮಾಣದ ಶ್ರೀಕಾಂತ್ ಹುಣಸೂರು ನಿರ್ದೇಶನದ ಡೈನಮಿಕ್ ಹೀರೊ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ ‘S/O ಮುತ್ತಣ್ಣ’ ಚಿತ್ರ ಏಕಕಾಲಕ್ಕೆ ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಇದೇ ಸೆಪ್ಟೆಂಬರ್‌ 12ರಂದು ತೆರೆಕಾಣಲು ಸಿದ್ಧವಾಗಿದೆ.

- Advertisement -

ಕನ್ನಡದ ʼಸು ಫ್ರಮ್ ಸೋʼ ಭರ್ಜರಿ ಯಶಸ್ಸಿನ ನಂತರ ಕನ್ನಡ ಚಿತ್ರಗಳ ಬೇಡಿಕೆ ಹೆಚ್ಚಾದಂತಿದೆ. ʼS/O ಮುತ್ತಣ್ಣʼ ಅಪ್ಪ – ಮಗನ ಬಾಂಧವ್ಯವನ್ನು ಬಣ್ಣಿಸುವ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಈ ಚಿತ್ರದ ಕಥೆಗೆ ಮಲಯಾಳಂನಲ್ಲೂ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿದ್ದ ಚಿತ್ರವನ್ನು ಸೆಪ್ಟೆಂಬರ್ 12 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿರುವ ಈ ಚಿತ್ರದ ಟ್ರೇಲರ್ ಆಗಸ್ಟ್ 22 ರಂದು ಬಿಡುಗಡೆಯಾಗಲಿದೆ. ಪ್ರಣಾಮ್ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೆಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದ ಹಿರಿಯ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ನುಡಿಯಂಗಳ | ಅಂತರಂಗ ಬಿಚ್ಚಿಡುವ ‘ಆಂಗಿಕ ಭಾಷೆ’

ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...