ಅಶ್ಲೀಲ ಸಾಹಿತ್ಯದ ಕುರಿತು ನೆಟ್ಟಿಗರಲ್ಲಿ ಕ್ಷಮೆಯಾಚಿಸಿದ ಪ್ರೇಮ್; ವಿವಾದಿತ ಹಾಡಿನ ಸಾಹಿತ್ಯ ಬದಲಿಸುತ್ತೇನೆ ಎಂದ ನಿರ್ದೇಶಕ

Date:

Untitled design 2026 03 17T140807.605

ಜೋಗಿ ಪ್ರೇಮ್‌ ಕೆಡಿ ದ ಡೆವಿಲ್‌ ಸಿನಿಮಾದ “ಸರ್ಸೆ ನಿನ್ನ ಸೆರಗು…” ಹಾಗೆ ಭಾರೀ ವಿರೋಧ ವ್ಯಕ್ತವಾದ ನಂತರ ಪ್ರತಿಕ್ರಿಯೆ ನೀಡಿರುವ ಪ್ರೇಮ್‌, “ವಿವಾದಿತ ಹಾಡಿನ ಸಾಹಿತ್ಯ ಬದಲಿಸುತ್ತೇನೆ. ಬೇರೆಯದೇ ಸಾಹಿತ್ಯ ರಚನೆ ಮಾಡಿ ಹಾಡು ಮಾಡುವುದಾಗಿ ಹೇಳಿದ್ದಾರೆ. ಯಾರಿಗಾದರೂ ನನ್ನಿಂದ ತೊಂದರೆಯಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

- Advertisement -

ಈ ಹಾಡಿನ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದರು. ಕೆಡಿ ದ ಡೆವಿಲ್‌ ಸಿನಿಮಾದ ಹಾಡು ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಇದೇ ಸೋಮವಾರದಂದು ಬಿಡುಗಡೆಯಾಗಿತ್ತು. ಹಾಡಿನ ಸಾಹಿತ್ಯವು ಅಶ್ಲೀಲತೆಯಿಂದ ಕೂಡಿದ್ದು ಸಿನಿ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಂಜಯ್‌ ದತ್‌ ಹಾಗೂ ನೊರಾ ಫತೇಹಿ ಈ  ಹಾಡಿಗೆ ಹೆಜ್ಜೆ ಹಾಕಿದ್ದು ಹಾಡಿನ ಉದ್ದಕ್ಕೂ ಹೆಣ್ಣನ್ನು ಅಪಮಾನಿಸುವ ದೃಶ್ಯಗಳು, ಅಶ್ಲೀಲ ನೃತ್ಯ ಸಂಯೋಜನೆಯೇ ತುಂಬಿ ಹೋಗಿತ್ತು. ಕಳೆದ ದಶಕಗಳಲ್ಲೇ ಇಂತಹ ಅಶ್ಲೀಲ ಸಾಹಿತ್ಯವಿರುವ ಸಿನಿಮಾ ಹಾಡು ಕೇಳಿ ಕಂಡಿರಲಿಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದರು.

ಕಂಗನಾ ರನೌತ್‌ ಹಾಗೂ ಅರ್ಮಾನ್‌ ಮಲಿಕ್‌ ರಂತಹ ಪ್ರಸಿದ್ಧರು ಸರ್ಸೆ ನಿನ್ನ ಸೆರಗ ಹಾಡಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ವಕೀಲರೊಬ್ಬರು ಕೇಂದ್ರ ಚಲನಚಿತ್ರ ಮಂಡಳಿಗೆ ದೂರು ನೀಡಿದ್ದು, ಈ ಹಾಡು ಅಪ್ರಾಪ್ತ ವಯಸ್ಕರ ಮೇಲೆ ದುಷ್ಪರಿಣಾಮ ಬೀರುವುದಾಗಿ ಆರೋಪಿಸಿದ್ದರು. ಹಾಡಿನ ಸಾಹಿತ್ಯ ಬದಲಿಸಿ ಮರು ಬಿಡುಗಡೆ ಮಾಡುವುದಾಗಿ ಪ್ರೇಮ್‌ ಮಾಧ್ಯಮ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...

ಮೈಸೂರು ಯುವ ದಸರಾ: ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳು ಬಿರುಸುಗೊಂಡಿದ್ದು, ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ...

ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ...