ಒಟಿಟಿಯಿಂದ ‘ಸತ್ಲುಜ್’ ದಿಢೀರ್ ಬ್ಯಾನ್: ಕೇಂದ್ರದ ವಿರುದ್ಧ ಪಂಜಾಬ್ ನಾಯಕರ ಆಕ್ರೋಶ

Date:

ನಟ ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ (Satluj) ಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್ ಆದ ZEE5 ನಿಂದ ಬಿಡುಗಡೆಯಾದ ಕೇವಲ 48 ಗಂಟೆಗಳಲ್ಲಿ ದಿಢೀರ್ ಆಗಿ ತೆಗೆದುಹಾಕಲಾಗಿದ್ದು, ಇದು ಪಂಜಾಬ್‌ನ ರಾಜಕೀಯ ನಾಯಕರು ಮತ್ತು ಚಿತ್ರರಂಗದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಚಿತ್ರವನ್ನು ಒಟಿಟಿಯಿಂದ ತೆಗೆದುಹಾಕಿದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ದೃಶ್ಯವೊಂದನ್ನು ಹಂಚಿಕೊಂಡಿರುವ ದಿಲ್ಜಿತ್ ದೋಸಾಂಜ್, “ನಾನು ಕತ್ತಲಿಗೆ ಸವಾಲು ಹಾಕುತ್ತೇನೆ” (#IChallengeTheDarkness) ಎಂದು ಬರೆದುಕೊಂಡು ಪಂಜಾಬ್ ಪರವಾಗಿ ಧ್ವನಿ ಎತ್ತಿದ್ದಾರೆ. ಅಲ್ಲದೆ, ಇಂಟರ್ನೆಟ್‌ನಿಂದ ಯಾವುದೇ ವಿಷಯವನ್ನು ಸಂಪೂರ್ಣವಾಗಿ ಅಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿ: ‘ಪಂಜಾಬ್ 95’ ಸಿನಿಮಾಕ್ಕೆ 120 ಕಡೆ ಕತ್ತರಿ: ಜಸ್ವಂತ್ ಸಿಂಗ್ ಖಲ್ರಾ ಬಗ್ಗೆ ಸರ್ಕಾರ ಹೆದರುತ್ತಿರುವುದೇಕೆ?

ಏನಿದು ಸಿನಿಮಾ, ವಿವಾದಕ್ಕೆ ಕಾರಣವೇನು?

ಈ ಸಿನಿಮಾ ಪಂಜಾಬ್‌ನ ಪ್ರಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಜಸ್ವಂತ್ ಸಿಂಗ್ ಖಾಲ್ರಾ ಅವರ ಜೀವನ ಮತ್ತು 1980-90ರ ದಶಕದಲ್ಲಿ ಪಂಜಾಬ್‌ನಲ್ಲಿ ನಡೆದ ಉಗ್ರಗಾಮಿ ದಮನದ ಸಂದರ್ಭದ ನೈಜ ಘಟನೆಗಳನ್ನು ಆಧರಿಸಿದೆ. ಈ ಚಿತ್ರಕ್ಕೆ ಮೊದಲು ‘ಘಲ್ಲುಘಾರಾ’ ಮತ್ತು ನಂತರ ‘ಪಂಜಾಬ್ 95’ (Punjab 95) ಎಂದು ಹೆಸರಿಡಲಾಗಿತ್ತು. ಸೆನ್ಸಾರ್ ಮಂಡಳಿ (CBFC) ಸುಮಾರು 127 ಕಡೆ ಕತ್ತರಿ ಹಾಕಲು ಸೂಚಿಸಿದ್ದರಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆ ಸಾಧ್ಯವಾಗದೆ, ಕೊನೆಗೆ ‘ಸತ್ಲುಜ್’ ಹೆಸರಿನಲ್ಲಿ ಜುಲೈ 3 ರಂದು ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿತ್ತು.

ಸೆನ್ಸಾರ್ ಮಂಡಳಿಯು ಚಿತ್ರದ ಕೆಲವು ಭಾಗಗಳನ್ನು “ಭಾರತ ವಿರೋಧಿ ಶಕ್ತಿಗಳು ಮತ್ತು ಖಲಿಸ್ತಾನಿಪರ ಗುಂಪುಗಳು ದುರುಪಯೋಗಪಡಿಸಿಕೊಳ್ಳಬಹುದು” ಎಂಬ ಭದ್ರತಾ ಕಾಳಜಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೊಂಡಿದೆ. ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಾರತದಲ್ಲಿ ಸದ್ಯಕ್ಕೆ ಚಿತ್ರದ ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ZEE5 ತಿಳಿಸಿದೆ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಲಭ್ಯವಿದೆ.

ಇದನ್ನೂ ಓದಿ: ಭಾರತ-ಪಾಕ್ ಗಡಿ ಬಳಿಯ ಚೆಕ್‌ಪಾಯಿಂಟ್‌ನಲ್ಲಿ ಪಂಜಾಬ್‌ನ ಇಬ್ಬರು ಪೊಲೀಸ್ ಸಿಬ್ಬಂದಿ ಶವವಾಗಿ ಪತ್ತೆ

ಕೇಂದ್ರದ ವಿರುದ್ಧ ಪಂಜಾಬ್ ನಾಯಕರ ಆಕ್ರೋಶ

ಕೇಂದ್ರ ಸರ್ಕಾರದ ಈ ಕ್ರಮವನ್ನು ಪಂಜಾಬ್‌ನ ವಿವಿಧ ಪಕ್ಷಗಳ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. “ದೇಶವು ತನ್ನದೇ ಆದ ಇತಿಹಾಸವನ್ನು ನೋಡಿ ಹೆದರಲು ಶುರು ಮಾಡಿದಾಗ ಸೆನ್ಸಾರ್‌ಶಿಪ್ ಅತ್ಯಂತ ಅಪಾಯಕಾರಿ ಅಸ್ತ್ರವಾಗುತ್ತದೆ” ಎಂದು ಎಎಪಿ ಸಂಸದ ಮಾಲ್ವಿಂದರ್ ಸಿಂಗ್ ಕಾಂಗ್ ಕಿಡಿಕಾರಿದ್ದಾರೆ. ಇನ್ನು ಕಾಂಗ್ರೆಸ್ ಶಾಸಕ ಸುಖ್‌ಪಾಲ್ ಖೈರಾ ಅವರು, “ನೈಜ ಘಟನೆಗಳನ್ನು ಮುಚ್ಚಿಡುವ ಪ್ರಯತ್ನ ಇದಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶಿರೋಮಣಿ ಅಕಾಲಿದಳ (SAD) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮತ್ತು ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರು, “ಇದು ನಮ್ಮ ಸಾಮೂಹಿಕ ನೆನಪು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ. ಇತಿಹಾಸವನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...