ಭಾವುಕತೆಯಲ್ಲಿ ಬಂಧಿಸುವ ವಡಿವೇಲು ಕಂಠಸಿರಿಯ ʼರಾಜಾ ಕಣ್ಣುʼ

Date:

ತಮಿಳಿನ ಖ್ಯಾತ ನಿರ್ದೇಶಕ ಮಾರಿ ಸೆಲ್ವರಾಜ್‌ ನಿರ್ದೇಶನದ, ಉದಯನಿಧಿ ಸ್ಟಾಲಿನ್‌, ಫಹಾದ್‌ ಫಾಸಿಲ್‌ ಮತ್ತು ಕೀರ್ತಿ ಸುರೇಶ್‌ ಮುಖ್ಯಭೂಮಿಕೆಯ ಬಹುನಿರೀಕ್ಷಿತ ʼಮಾಮನ್ನನ್ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಭಾಗವಾಗಿ ಚಿತ್ರತಂಡ ಶುಕ್ರವಾರ ಬಿಡುಗಡೆ ಮಾಡಿರುವ ʼರಾಜಾ ಕಣ್ಣುʼ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸದ್ದು ಮಾಡುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ.

- Advertisement -

ಬಿಡುಗಡೆಯಾದ 24 ಗಂಟೆಗಳಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿರುವ ʼರಾಜಾ ಕಣ್ಣುʼ ಹಾಡಿಗೆ ತಮಿಳಿನ ಜನಪ್ರಿಯ ಹಾಸ್ಯನಟ ವಡಿವೇಲು ಧ್ವನಿಯಾಗಿರುವುದು ವಿಶೇಷ. ಕೇಳುಗರನ್ನು ಭಾವುಕರನ್ನಾಗಿಸುವ ಈ ಹಾಡಿಗೆ ಯುಗಭಾರತಿ ಅವರ ಸಾಹಿತ್ಯವಿದ್ದು, ದಿಗ್ಗಜ ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌ ಅವರ ಹಿನ್ನೆಲೆ ಸಂಗೀತವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಪರಿಯೆರುಂ ಪೆರುಮಾಳ್‌ʼ ಮತ್ತು ಧನುಷ್‌ ನಟನೆಯ ʼಕರ್ಣನ್‌ʼ ಚಿತ್ರಗಳಿಗೆ ಆ್ಯಕ್ಷನ್ ಕಟ್‌ ಹೇಳುವ ಮೂಲಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಾರಿ ಸೆಲ್ವರಾಜ್‌, ರಾಜಕೀಯ ಹಿನ್ನೆಲೆಯುಳ್ಳ ಕಥಾಹಂದರವನ್ನು ಆಧರಿಸಿ ʼಮಾಮನ್ನನ್ʼ ಚಿತ್ರವನ್ನು ತೆರೆಗೆ ಅಳವಡಿಸಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಚಿತ್ರದ ಟೀಸರ್‌ ಕೂಡ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ರಾಜಕಾರಣ, ಹಳ್ಳಿಗರ ಸಂಘರ್ಷ, ಪೊಲೀಸ್‌ ದೌರ್ಜನ್ಯದ ಸುತ್ತ ಮೂಡಿಬಂದಿದೆ ಎಂಬುದನ್ನು ಟೀಸರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿತ್ತು.

ವಡಿವೇಲು ಈ ಚಿತ್ರದ ಹಾಡಿಗೆ ಮಾತ್ರ ಧ್ವನಿಯಾಗಿಲ್ಲ, ಬದಲಿಗೆ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರವೀನಾ ರವಿ, ಕೌಶಿಕ್‌ ಮಹಾತಾ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಮುಖ್ಯಭೂಮಿಕೆ ನಿಭಾಯಿಸಿರುವ ಉದಯನಿಧಿ ಸ್ಟಾಲಿನ್‌ ಅವರೇ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಸಿನಿಮಾ | ʼಪೂಚಂತೇʼಯ ಪ್ರಸ್ತುತತೆ ಸಾರುವ ʼಡೇರ್‌‌ಡೆವಿಲ್ ಮುಸ್ತಾಫಾʼ

ಸದ್ಯ ʼಮಾಮನ್ನನ್ʼ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ಸಾಗಿದ್ದು, ʼರಾಜಾ ಕಣ್ಣುʼ ಹಾಡಿನ ಮೂಲಕ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿರುವ ಚಿತ್ರತಂಡ ಜೂನ್‌ ತಿಂಗಳಿನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...