ರಾಜ್‌ ಬಿ ಶೆಟ್ಟಿ ನಿರ್ಮಾಣದ ಕಾಮಿಡಿ ಹಾರರ್‌ ಜಾನರ್‌ನ ʼಸು ಫ್ರಮ್ ಸೋʼ ಜು.25ಕ್ಕೆ ತೆರೆಗೆ

Date:

ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡಿ, ಜೆಪಿ ತುಮಿನಾಡು ನಿರ್ದೇಶನದ ಕಾಮಿಡಿ ಹಾರರ್‌ ಜಾನರ್‌ನ “ಸು ಫ್ರಮ್ ಸೋ” ಚಿತ್ರ ಇದೇ ಜುಲೈ 25ಕ್ಕೆ ಬಿಡುಗಡೆಯಾಗಲಿದೆ.

- Advertisement -

ಇತ್ತೀಚೆಗೆ ಬಿಡುಗಡೆಯಾಗಿದ್ದ ಚಿತ್ರದ ಟ್ರೇಲರ್, ಚಿತ್ರಪ್ರೇಮಿಗಳಿಂದ ಭೇಷ್‌ ಎನಿಸಿಕೊಂಡಿದೆ. ಈಗಾಗಲೇ ಬಿಡುಗಡೆಯಾಗಿರುವ ʼಡಾoಕ್ಸ್ ಅಂಥಮ್ʼ ಹಾಡಿಗೂ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ರಂಗಭೂಮಿಯಲ್ಲಿ ಸಾಕಷ್ಟು‌ ಹೆಸರು ಮಾಡಿರುವ ಗೆಳೆಯ ಜೆಪಿ ತುಮಿನಾಡ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಅವರು ಸಿದ್ದ ಮಾಡಿಕೊಂಡಿದ್ದ ಈ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ನಾನು ಬಹಳ ಇಷ್ಟಪಡುವ ಕಾಮಿಡಿ ಜಾನರ್ ನ ಚಿತ್ರವಿದು. “ಸು ಫ್ರಮ್ ಸೋ” ಎಂದರೆ ಸೋಮೇಶ್ವರ ಎಂಬ ಸ್ಥಳದ ಹಾಗೂ ಸುಲೋಚನ ಎಂಬ ಪಾತ್ರದ ಹೆಸರು. ಹಾಗಾಗಿ ಶಾರ್ಟ್‌ ಫಾರ್ಮ್‌ನಲ್ಲಿ ಸು ಫ್ರಮ್‌ ಸೋ. ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಈ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50ದಿನಗಳ ಚಿತ್ರೀಕರಣ ನಡೆದಿದೆ. ನಿರ್ದೇಶನ ಮಾಡಿರುವ ಜೆಪಿ ತುಮಿನಾಡ, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಛಾಯಾಗ್ರಹಣ, ಸುಮೇಧ್ ಕೆ ಅವರ ಸಂಗೀತ ನಿರ್ದೇಶನ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಹಿನ್ನಲೆ ಸಂಗೀತ ಸಂದೀಪ್ ತುಳಸಿದಾಸ್ ಅವರದ್ದು. ಶಶಿಧರ್ ಶೆಟ್ಟಿ ಬರೋಡಾ ಹಾಗೂ ರವಿ ರೈ ಕಳಸ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಈಗಾಗಲೇ ಜನರ ಮನ ತಲುಪಿದೆ. ಚಿತ್ರ ಜುಲೈ 25 ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ, ಪ್ರೋತ್ಸಾಹ ನೀಡಿ” ಎಂದು ರಾಜ್ ಬಿ ಶೆಟ್ಟಿ ತಿಳಿಸಿದರು.

ಇದನ್ನೂ ಓದಿ: ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲ ಚಿತ್ರ ಮಂದಿರಗಳ ಗರಿಷ್ಠ ದರ 200 ರೂ.: ರಾಜ್ಯ ಸರ್ಕಾರದಿಂದ ಆದೇಶ

ನಿರ್ದೇಶಕ ಜೆಪಿ ತುಮಿನಾಡ, “ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ. ಈಗ ಕೆಲವು ವರ್ಷಗಳ ನಂತರ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ‌. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಇನ್ನೂ ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು. ಚಿತ್ರತಂಡದ ಸಹಕಾರದಿಂದ ಇದೇ ಜುಲೈ 25ಕ್ಕೆ ಒಂದೊಳ್ಳೆ ಚಿತ್ರ ನಿಮ್ಮ ಮುಂದೆ ಬರುತ್ತಿದೆ. ನೋಡಿ ಹಾರೈಸಿ” ಎಂದರು.

ನಿರ್ಮಾಪಕ ರವಿ ರೈ ಕಳಸ ಮಾತನಾಡಿ, ನಮ್ಮ ಚಿತ್ರಕ್ಕೆ ಎಲ್ಲರ ಬೆಂಬಲವಿರಲಿ ಎಂದರು. ಚಿತ್ರದಲ್ಲಿ ಆರು ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಸುಮೇಧ್ ತಿಳಿಸಿದರು. ಕಲಾವಿದರಾದ ದೀಪಕ್ ರೈ ಪಣಜೆ, ಶನೀಲ್ ಗೌತಮ್, ಸಂಧ್ಯಾ ಅರ್ಕೆರೆ, ಮೈಮ್ ರಾಮದಾಸ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಪ್ರೊಡಕ್ಷನ್ ಡಿಸೈನರ್ ಸುಷ್ಮ ಹಾಗೂ ಸಂಕಲನಕಾರ ನವೀನ್ ಶೆಟ್ಟಿ, ಎಕ್ಸಕ್ಯೂಟಿವ್ ಪ್ರೊಡ್ಯೂಸರ್ ಬಾಲು ಕುಮಟಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...