2 ಭಾಗಗಳಲ್ಲಿ ತೆರೆಗೆ ಬರಲಿದೆ ʼಸಪ್ತ ಸಾಗರದಾಚೆ ಎಲ್ಲೋʼ

Date:

Advertisements

40ನೇ ವಸಂತಕ್ಕೆ ಕಾಲಿಟ್ಟ ರಕ್ಷಿತ್‌ ಶೆಟ್ಟಿ

ನಿರೀಕ್ಷೆ ಹೆಚ್ಚಿಸಿದ ʼಸಪ್ತ ಸಾಗರದಾಚೆ ಎಲ್ಲೋʼ

ಸ್ಯಾಂಡಲ್‌ವುಡ್‌ನ ಖ್ಯಾತ ನಟ ರಕ್ಷಿತ್‌ ಶೆಟ್ಟಿ ಮಂಗಳವಾರ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಕೋರುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಕುರಿತ ಕುತೂಹಲಕಾರಿ ಮಾಹಿತಿಯೊಂದು ಹೊರಬಿದ್ದಿದೆ.

Advertisements

ರಕ್ಷಿತ್‌ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಮಾಹಿತಿಯೊಂದನ್ನು ಹೊರಹಾಕಿರುವ ನಿರ್ದೇಶಕ ಹೇಮಂತ್‌ ರಾವ್‌, ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕಥಾನಾಯಕನ ಮನು ಬದುಕಿನ ಚಿತ್ರಣವನ್ನು ಎರಡು ಶೇಡ್‌ಗಳಲ್ಲಿ ಚಿತ್ರಸಲಾಗಿದೆ. ಹೀಗಾಗಿ ಚಿತ್ರವನ್ನು ಎರಡು ಭಾಗಗಳಲ್ಲಿ ನಿರೂಪಿಸಲಾಗಿದೆ ಎಂದಿದ್ದಾರೆ. ಇದೇ ಜೂನ್‌ 15 ಚಿತ್ರದ ಎರಡೂ ಭಾಗಗಳ ಬಿಡುಗಡೆ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ಶೀರ್ಷಿಕೆ ಮತ್ತು ಟೀಸರ್‌ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಮನು ಮತ್ತು ಸುರಭಿ ಎಂಬ ಇಬ್ಬರು ಪ್ರೇಮಿಗಳ ಪ್ರೀತಿಯ ಕಥೆಯ ಸುತ್ತ ಮೂಡಿಬಂದಿದೆ. ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌ ಕಾಣಿಸಿಕೊಂಡಿದ್ದಾರೆ. ಯುವನಟಿ ಚೈತ್ರಾ ಆಚಾರ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ಈ ಹಿಂದೆ ಹೇಮಂತ್‌ ರಾವ್‌ ಮತ್ತು ರಕ್ಷಿತ್‌ ಶೆಟ್ಟಿ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಸಿನಿಮಾ ಭಾರೀ ಜನಪ್ರಿಯತೆ ಗಳಿಸಿತ್ತು. ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾದ ಮೂಲಕ ಮತ್ತೆ ಒಂದಾಗಿರುವ ಈ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಲು ಸಜ್ಜಾಗುತ್ತಿದೆ. ಈಗಾಗಲೇ ಸಿನಿಮಾದ ಎರಡೂ ಭಾಗಗಳ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ರಕ್ಷಿತ್‌ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ತೀರ್ಮಾನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

Download Eedina App Android / iOS

X