‘ವಾರ್ 2’ ಟೀಕಿಸಿ, ‘ಧುರಂಧರ್ 2’ ಕೊಂಡಾಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ; ನೆಟ್ಟಿಗರಿಂದ ಟೀಕೆ

Date:

ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇತ್ತೀಚಿನ ಆಕ್ಷನ್ ಸಿನಿಮಾಗಳ ಬಗ್ಗೆ ದೊಡ್ಡ ಚರ್ಚೆ ಹುಟ್ಟುಹಾಕಿದ್ದಾರೆ. ಅವರು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2: ದ ರಿವೆಂಜ್’ ಸಿನಿಮಾವನ್ನು ಕೊಂಡಾಡಿದ್ದಾರೆ. ಅದೇ ಸಮಯದಲ್ಲಿ, ಹೆಸರೇಳದೆ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ಅವರ ‘ವಾರ್ 2’ ಸಿನಿಮಾವನ್ನು ಟೀಕಿಸಿದ್ದಾರೆ. ಇದು ಈಗ ಭಾರಿ ವೈರಲ್‌ ಆಗಿದ್ದು, ನೆಟ್ಟಿಗರು ನಿರ್ದೇಶಕನ ಇಬ್ಬಗೆ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

​ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ರಾಮ್ ಗೋಪಾಲ್ ವರ್ಮಾ, ‘ಧುರಂಧರ್ 2’ ಚಿತ್ರದಲ್ಲಿ ರಣವೀರ್ ಸಿಂಗ್ ಅವರ ಪಾತ್ರವು ಕೇವಲ ನಾಯಕನಾಗಿರದೆ, ಕೆಲವು ತಪ್ಪುಗಳನ್ನು ಮಾಡುವ ಸಾಮಾನ್ಯ ಮನುಷ್ಯನಂತೆ ಇದೆ ಎಂದಿದ್ದಾರೆ. ಪಾತ್ರಗಳನ್ನು ಬಹಳ ನೈಜವಾಗಿ ಮತ್ತು ಅದ್ಭುತವಾಗಿ ತೋರಿಸಿದ ನಿರ್ದೇಶಕ ಆದಿತ್ಯ ಧರ್ ಅವರ ಕೆಲಸವನ್ನು ವರ್ಮಾ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದೇ ಸಂದರ್ಭದಲ್ಲಿ ​ಹೆಸರು ಹೇಳದೆ ‘ವಾರ್ 2’ ಚಿತ್ರವನ್ನು ಟೀಕಿಸಿದ ಅವರು, ಬಹುಕೋಟಿ ವೆಚ್ಚದ ಸಿನಿಮಾದಲ್ಲಿ ಇಬ್ಬರು ದೊಡ್ಡ ನಾಯಕರು ಕಾದಾಡುತ್ತಾರೆ. ಆದರೆ, ಏಟು ತಿಂದರೂ ಅವರ ಮುಖದಲ್ಲಿ ಯಾವುದೇ ನೋವಿನ ಭಾವನೆಗಳಿಲ್ಲ. ತಮ್ಮ ಇಮೇಜ್ ಉಳಿಸಿಕೊಳ್ಳಲು ಅವರು ನೋವು ಅರಿಯದ ಸೂಪರ್‌ಮ್ಯಾನ್‌ಗಳಂತೆ ಇರುತ್ತಾರೆ. ಇಂತಹ ಸಿನಿಮಾಗಳಲ್ಲಿ ನೈಜತೆ ಇರುವುದಿಲ್ಲ ಎಂದು ವರ್ಮಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ ಅಸ್ತ್ರಕ್ಕೆ ಟಿಎಂಸಿ ಪ್ರತ್ಯಸ್ತ್ರ; ಸುವೇಂದು ಎದುರು ಸ್ಪರ್ಧಿಸಿರುವ ‘ಪಬಿತ್ರ ಕರ್’ ಯಾರು ಗೊತ್ತೆ?

​ಇದಕ್ಕೆ ತದ್ವಿರುದ್ಧವಾಗಿ, ‘ಧುರಂಧರ್ 2’ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಅರ್ಜುನ್ ರಾಂಪಾಲ್ ಅವರು ರಣವೀರ್ ಸಿಂಗ್‌ಗೆ ಚಾಕುವಿನಿಂದ ಇರಿದಾಗ, ರಣವೀರ್ ಅವರ ಮುಖದಲ್ಲಿ ಅಪ್ಪಟ ನೈಜ ನೋವು ಕಾಣುತ್ತದೆ. ಹಾಲಿವುಡ್ ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರ ನಟನೆಯ ನಂತರ ನಾನು ಅಂತಹ ಅದ್ಭುತ ಮತ್ತು ನೈಜ ನಟನೆಯನ್ನು ರಣವೀರ್ ಅವರ ಮುಖದಲ್ಲಿ ಮಾತ್ರ ನೋಡಿದೆ ಎಂದು ಹೊಗಳಿದ್ದಾರೆ.

​ರಕ್ತ ಸುರಿಸುವ, ನೋವು ಅನುಭವಿಸುವ ಮತ್ತು ಸಾಮಾನ್ಯ ಮನುಷ್ಯನಂತೆ ಅಳುವ ವ್ಯಕ್ತಿ ಮಾತ್ರವೇ ನಿಜವಾದ ದೊಡ್ಡ ಹೀರೊ ಆಗಬಲ್ಲ ಎಂದು ವರ್ಮಾ ಹೇಳಿದ್ದಾರೆ. ಕೃತಕವಾಗಿ ಬಿಲ್ಡಪ್ ಕೊಡುವ ಕಮರ್ಷಿಯಲ್ ಸಿನಿಮಾಗಳಿಗಿಂತ, ಪಾತ್ರಗಳನ್ನು ಬಹಳ ಮಾನವೀಯತೆಯಿಂದ ಮತ್ತು ನೈಜವಾಗಿ ತೆರೆಯ ಮೇಲೆ ತಂದಿರುವ ಆದಿತ್ಯ ಧರ್ ಅವರ ನಿರ್ದೇಶನದ ಶೈಲಿ ನಿಜಕ್ಕೂ ಶ್ರೇಷ್ಠ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಎರಡೂ ರಕ್ತಪಾತ ಚಿತ್ರಗಳಾಗಿದ್ದು ಎರಡರಲ್ಲೂ ಹಿಂಸೆ ಹೆಚ್ಚಾಗಿದೆ. ನಿರ್ದೇಶಕರ ಬಣ್ಣವೂ ಬಯಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...