ಅಶ್ಲೀಲ ಕಮೆಂಟ್ ಪ್ರಕರಣ: ಕೋರ್ಟ್‌ನಲ್ಲಿ ರಮ್ಯಾ ಹೇಳಿಕೆ

Date:

ಇನ್‌ಸ್ಟಾಗ್ರಾಮ್‌ನಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ 7 ತಿಂಗಳ ಹಿಂದೆ ನಟಿ ರಮ್ಯಾ ದೂರು ನೀಡಿದ್ದರು. ಪ್ರಕರಣ ಸಂಬಂಧ ಇಂದು(ಮಾರ್ಚ್ 10) ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದರು. ಈಗಾಗಲೇ ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ವಿಚಾರಣೆಯಲ್ಲಿ ಇನ್ ಕ್ಯಾಮರಾ ಪ್ರೊಸಿಡಿಂಗ್ಸ್ ಕೂಡ ನಡೆದಿದೆ. ಜುಲೈ 28ರಂದು ಕೆಟ್ಟದಾಗಿ ಮೆಸೇಜ್ ಕಳಿಸಿದ್ದ 43 ಖಾತೆಗಳನ್ನು ಉಲ್ಲೇಖಿಸಿ 4 ಪುಟಗಳ ದೂರು ನೀಡಿದ್ದರು.

- Advertisement -

ಸೂಕ್ಷ್ಮ ಪ್ರಕರಣವಾಗಿರುವ ಕಾರಣ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಯಿತು. ದರ್ಶನ್ ಅಭಿಮಾನಿಗಳು ತಮಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆ ಎಂದು ನಟಿ ರಮ್ಯಾ ದೂರು ದಾಖಲಿಸಿದ್ದರು. ಅದರ ಬೆನ್ನಲ್ಲೇ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 50 ಇನ್‌ಸ್ಟಾ ಅಕೌಂಟ್‌ಗಳನ್ನು ಬ್ಲಾಕ್ ಮಾಡಿಸಿದ್ದರು. ಕೆಲ ಆರೋಪಿಗಳು ಪರಾರಿ ಆಗಿದ್ದರು. ಬಂಧಿತ ಆರೋಪಿಗಳು ಜಾಮೀನು ಪಡೆದಿದ್ದರು. ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ರಮ್ಯಾ ಮಾತನಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

‘ಇವತ್ತು ಸಾಕ್ಷಿ ನೀಡಬೇಕಿತ್ತು. ಕ್ರಾಸ್ ಎಕ್ಸಾಮಿನೇಷನ್​ಗೆ ಮುಂದಿನ ದಿನಾಂಕದಲ್ಲಿ ಕರೆದಿದ್ದಾರೆ. ನನಗೆ ಈ ಕೇಸ್ ಮಾಡಬೇಕು ಅಂತ ಆಸೆ ಇಲ್ಲ. ಆರೋಪಿಗಳನ್ನು ನೋಡಿದರೆ ಬೇಜಾರಾಗುತ್ತದೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ನೀಡುತ್ತಾರೆ. ಅದನ್ನು ನಿಲ್ಲಿಸಬೇಕು. ಹೆಣ್ಮಕ್ಕಳಿಗೆ ರಕ್ಷಣೆ ನೀಡಬೇಕು. ಆ ಕಾರಣಕ್ಕಾಗಿ ಕೇಸ್ ಹಾಕಿದ್ದೇನೆ’ ಎಂದು ರಮ್ಯಾ ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ರಜನಿ, ಶಿವಣ್ಣ ಚಿತ್ರಗಳಾದ ​ ‘ಜೈಲರ್-2’, ‘ಬೇಲ್’ ಆನ್‌ಲೈನ್ ಪೈರಸಿಗೆ ಮದ್ರಾಸ್ ಹೈಕೋರ್ಟ್ ತಡೆ

ರಜಿನಿಕಾಂತ್ ಅಭಿನಯದ 'ಜೈಲರ್-2' ಹಾಗೂ ಶಿವರಾಜ್‌ಕುಮಾರ್ ನಟನೆಯ 'ಬೇಲ್' ಚಿತ್ರಗಳನ್ನು ವೆಬ್‌ಸೈಟ್‌ಗಳು...

ಪಾತ್ರಕ್ಕಾಗಿ 14 ಕೆ.ಜಿ. ತೂಕ ಹೆಚ್ಚಿಸಿಕೊಂಡ ನಿಮಿಷಾ ಸಜಯನ್: ಅಭಿನಯವನ್ನೇ ಉಸಿರಾಗಿಸಿಕೊಂಡ ಅಪರೂಪದ ಕಲಾವಿದೆ

ಭಾರತೀಯ ಚಿತ್ರರಂಗದಲ್ಲಿ ನಾಯಕಿಯೊಬ್ಬಳು ಯಶಸ್ವಿಯಾಗಬೇಕಾದರೆ ಹೇಗಿರಬೇಕು ಎಂಬುದಕ್ಕೆ ಬಹುಕಾಲದಿಂದ ಕೆಲವು ಅಲಿಖಿತ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...