ಮೈಸೂರು ಸ್ಯಾಂಡಲ್ ಸೋಪ್‍: ತಮನ್ನಾ ಆಯ್ಕೆಗೆ ರಮ್ಯಾ ಕಿಡಿ

Date:

ಮೈಸೂರು ಸ್ಯಾಂಡಲ್ ಸೋಪ್‍ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿಕೊಂಡಿದೆ. ಅದಕ್ಕಾಗಿ ತಮನ್ನಾ 6.20 ಕೋಟಿ ರೂ. ಸಂಭಾವನೆ ಪಡೆದಿದ್ದು, ಎರಡು ವರ್ಷಗಳ ಕಾಲ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್‌ನ ರಾಯಭಾರಿಯಾಗಿ ಕನ್ನಡೇತರರನ್ನು ಆಯ್ಕೆ ಮಾಡಿರುವುದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ನಟಿ, ರಾಜಕಾರಣಿ, ಮಾಜಿ ಸಂಸದೆ ರಮ್ಯಾ ಕೂಡ ಸರ್ಕಾರವನ್ನು ಟೀಕಿಸಿದ್ದಾರೆ. ಸರ್ಕಾರ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ಇನ್ಸ್ಟಾಟ್ರಾಗ್ರಾಂನ ತಮ್ಮ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ, “ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್‍ಗೆ ದೀರ್ಘ ಇತಿಹಾಸ, ಪರಂಪರೆಯಿದೆ. ಪ್ರತಿಯೊಬ್ಬ ಕನ್ನಡಿಗರು ಅದರ ರಾಯಭಾರಿಗಳಾಗಿದ್ದಾರೆ. ಈ ಉತ್ಪನ್ನವನ್ನು ಜಗತ್ತಿಗೆ ಪರಿಚಯಿಸಲು ರಾಯಭಾರಿಯ ಅಗತ್ಯವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಒಂದು ವಸ್ತುವನ್ನು ಮಾರುಕಟ್ಟೆಯಲ್ಲಿ ಪ್ರಚಾರ ಮಾಡಲು ಹಲವು ದಾರಿಗಳು ಇರುತ್ತವೆ. ಇಂತಹ ಕಾಲಘಟ್ಟದಲ್ಲಿ ಮೈಸೂರು ಸ್ಯಾಂಡಲ್ ಸೋಪ್‍ಗೆ ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ. ಸರ್ಕಾರವು ಜನರ ತೆರಿಗೆ ಹಣ ವ್ಯರ್ಥ ಮಾಡುತ್ತಿದೆಯಷ್ಟೇ…. ಮತ್ತೇನೂ ಇಲ್ಲ….” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸೆಲೆಬ್ರಿಟಿಗಳು ಪ್ರಚಾರ ಮಾಡುವುದನ್ನು ನೋಡಿ, ಜನರು ವಸ್ತುಗಳನ್ನು ಖರೀದಿಸುವುದಿಲ್ಲ. ಜನರು ಬದಲಾಗುತ್ತಿದ್ದಾರೆ. ಅವರಿಗೆ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಗಮನಿಸುತ್ತಾರೆ, ತಿಳಿದುಕೊಂಡಿದ್ದಾರೆ. ಯಾವುದಾದರೂ ಉತ್ಪನ್ನವನ್ನು ಜನ ಮೆಚ್ಚಿ ಖರೀದಿಸಬೇಕು ಎಂದರೆ, ಆ ಉತ್ಪನ್ನವು ಉತ್ತಮ ಗುಣಮಟ್ಟ ಹೊಂದಿರಬೇಕು” ಎಂದು ರಮ್ಯಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...