‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದಿರುವ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಿರುತೆರೆ ನಟಿಯೊಬ್ಬರು ಮಡೆನೂರು ಮನು ವಿರುದ್ಧ ಆರೋಪ ಮಾಡಿದ್ದಾರೆ. ಎಫ್‌ಐಆರ್ ದಾಖಲಾಗಿರುವುದರಿಂದ ಮನು ಅವರಿಗೆ ಬಂಧನ ಭೀತಿ ಶುರವಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ
‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಮಡೆನೂರು ಮನು ಖ್ಯಾತಿ ಆಗಿದ್ದರು. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಕೂಡ ನಾಯಕನಾಗಿ ಮಡೆನೂರು ಮನು ಅವರು ನಟಿಸಿದ್ದಾರೆ. ಈ ಚಿತ್ರ ಮೇ 23ರಂದು ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲೇ ಅವರ ವಿರುದ್ಧ ಅತ್ಯಾಚಾರ ಆರೋಪ ಒಂದು ಕೇಳಿ ಬಂದಿದೆ.
ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ’ ಎಂದು ನಟಿ ದೂರು ನೀಡಿದ್ದಾರೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮನುಗಾಗಿ ಹುಡುಕಾಟ ನಡೆಸಿದ್ದಾರೆ.
