ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ನಿಶ್ಚಿತಾರ್ಥ; ಮದುವೆ ದಿನಾಂಕ ಬಹಿರಂಗ

Date:

Advertisements

ಹಲವಾರು ವರ್ಷಗಳಿಂದ ‘ಡೇಟಿಂಗ್’ ಮಾಡುತ್ತಿದ್ದಾರೆ ಎಂಬ ವದಂತಿಗಳಿಗೆ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ತೆರೆ ಎಳೆದಿದ್ದಾರೆ. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮದುವೆಗೆ ಸಿದ್ದತೆ ನಡೆಸುತ್ತಿದ್ದಾರೆ. 2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ, ತಮ್ಮ ನಿಶ್ಚಿತಾರ್ಥವನ್ನು ನಟ-ನಟಿಯ ಆಪ್ತ ತಂಡವು ದೃಢಪಡಿಸಿದೆ. ಇಬ್ಬರು, 2026ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ತಿಳಿಸಿರುವುದಾಗಿ ‘ಹಿಂದುಸ್ತಾನ್ ಟೈಮ್ಸ್‌’ ವರದಿ ಮಾಡಿದೆ.

ಆದಾಗ್ಯೂ, ಈವರೆಗೆ ರಶ್ಮಿಕಾ ಅಥವಾ ವಿಜಯ್ – ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಯಾವುದೇ ಪೋಸ್ಟ್‌ಅನ್ನು ಹಂಚಿಕೊಂಡಿಲ್ಲ. ಮಾತ್ರವಲ್ಲದೆ, ಅಧಿಕೃತವಾಗಿ ಘೋಷಿಸಿಲ್ಲ.

ರಶ್ಮಿಕಾ ಮತ್ತು ವಿಜಯ್ 2018ರಲ್ಲಿ ಬಿಡುಗಡೆಯಾದ ʼಗೀತಾ ಗೋವಿಂದಂʼ ಚಿತ್ರದಲ್ಲಿ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಿದ್ದರು. ಆ ನಂತರ, 2019ರ ʼಡಿಯರ್ ಕಾಮ್ರೇಡ್‌ʼ ಸಿನಿಮಾದಲ್ಲಿಯೂ ಕಾಣಿಸಿಕೊಂಡರು. ಆ ಸಮಯದಿಂದಲೂ ಅವರು ‘ಡೇಟಿಂಗ್‌’ನಲ್ಲಿದ್ದಾರೆ ಎಂಬ ವದಂತಿಗಳು ಹರಿದಾಡಲಾರಂಭಿಸಿದ್ದವು.

ವಿಜಯ್ ಮತ್ತು ರಶ್ಮಿಕಾ ಆಗಾಗ್ಗೆ ಒಟ್ಟಿಗೆ ಸಮಯ ಕಳೆಯುತ್ತಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದವು. 2024ರಲ್ಲಿ, ತಾವು ‘ಸಿಂಗಲ್’ ಅಲ್ಲವೆಂದು ರಶ್ಮಿಕಾ ಹೇಳಿಕೊಂಡಿದ್ದರು. ಆದರೆ, ತಮ್ಮ ಪ್ರೇಮಿ ಯಾರು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಇದೀಗ, ರಶ್ಮಿಕಾ-ವಿಜಯ್ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳ ಗುಮಾನಿಗೆ ಸ್ಪಷ್ಟನೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುರಂತದಲ್ಲಿ ಮರೆಯಾಗಿ ಜನಸಾಗರವ ಸೆಳೆದ ಈ ಹಾಡುಗಾರ ಯಾರು?

ಝುಬಿನ್ ಗರ್ಗ್ ಅಸ್ಸಾಮಿ ಜನರಿಗೆ ಮಗನಾಗಿ, ಅಣ್ಣನಾಗಿ ಜನಪದದಲ್ಲಿ ಬೆರೆತು ಹೋಗಿದ್ದರು....

ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ಕಸ್ಟಮ್ಸ್‌ನಿಂದ ಸಮನ್ಸ್: ಐಷಾರಾಮಿ ಕಾರುಗಳು ವಶಕ್ಕೆ

ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ ಕೊಚ್ಚಿಯ ಎಲಂಕುಲಂ ನಿವಾಸದ...

ಪ್ರತಿಷ್ಠಿತ ‘ಫಾಲ್ಕೆ’ಯ ಮೆರಗು ಹೆಚ್ಚಿಸಿದ ಮೋಹನ್ ಲಾಲ್

ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ...

ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ...

Download Eedina App Android / iOS

X