ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ನವರಂಗ್ ಥಿಯೇಟರ್ ಮಾಲೀಕ ಕೆಸಿಎನ್ ಮೋಹನ್ ಬೆಂಗಳೂರಿನಲ್ಲಿ ರವಿವಾರ ನಿಧನರಾಗಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಇವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೆಸಿಎನ್ ಮೋಹನ್, ಕನ್ನಡದ ದಿಗ್ಗಜ ಚಲನಚಿತ್ರ ನಿರ್ಮಾಪಕ ದಿವಂಗತ ಕೆಸಿಎನ್ ಗೌಡ ಅವರ ಪುತ್ರ.
ವಿಷ್ಣುವರ್ಧನ್, ಮಹಾಲಕ್ಷ್ಮಿ, ವಜ್ರಮುನಿ ಮತ್ತು ಎನ್ಎಸ್ ರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ‘ಜಯಸಿಂಹ’, ‘ಜೂಲಿ’, ‘ರಾಮರಾಜ್ಯದಲ್ಲಿ ರಾಕ್ಷಸರು’, ‘ಭಲೇ ಚತುರ’ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಪಕರಾಗಿ ಕೆಲಸ ಮಾಡಿದ್ದರು.