ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್ ಒಪ್ಪಿಸಬೇಕು. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿದೆ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು.
ಎರಡೂ ಕಡೆಯ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಆದೇಶ ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯ ಪೈಕಿ ನಾಲ್ವರಿಗೆ ಜಾಮೀನು ದೊರೆತಿದೆ. ನಟಿ ಪವಿತ್ರ ಗೌಡ ಒಳಗೊಂಡು ಇನ್ನುಳಿದ 13 ಮಂದಿ ಕಳೆದ 131(ಜೂನ್.11) ದಿನಗಳಿಂದ ಬೆಂಗಳೂರು,ಮೈಸೂರು ಸೇರಿದಂತೆ ವಿವಿಧ ಜೈಲುಗಳಲ್ಲಿದ್ದಾರೆ. ಸದ್ಯ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದಾರೆ.
