ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು

Date:

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

- Advertisement -

ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್‌ ಒಪ್ಪಿಸಬೇಕು. ದರ್ಶನ್‌ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು. 

ಎರಡೂ ಕಡೆಯ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಆದೇಶ ಪ್ರಕಟಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯ ಪೈಕಿ ನಾಲ್ವರಿಗೆ ಜಾಮೀನು ದೊರೆತಿದೆ. ನಟಿ ಪವಿತ್ರ ಗೌಡ ಒಳಗೊಂಡು ಇನ್ನುಳಿದ 13 ಮಂದಿ ಕಳೆದ 131(ಜೂನ್‌.11) ದಿನಗಳಿಂದ ಬೆಂಗಳೂರು,ಮೈಸೂರು ಸೇರಿದಂತೆ ವಿವಿಧ ಜೈಲುಗಳಲ್ಲಿದ್ದಾರೆ. ಸದ್ಯ ದರ್ಶನ್‌ ಅವರು ಬಳ್ಳಾರಿ ಜೈಲಿನಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...