ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ದರ್ಶನ್ ಪರ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು.
ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಆದರೆ ಎಸ್ಪಿಪಿ ಅವರು ದರ್ಶನ್ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ.
