ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ತೀರ್ಮಾನ

Date:

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬುದು ಗುರುವಾರ ತೀರ್ಮಾನವಾಗಲಿದೆ.

ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿದೆ.

ಆಗಸ್ಟ್ 14ರಂದು ಬೆಳಿಗ್ಗೆ 10.30ಕ್ಕೆ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆ‌ರ್. ಮಹಾದೇವನ್ ಅವರ ಪೀಠವು ತೀರ್ಪು ನೀಡಲಿದೆ. ಸುಪ್ರೀಂ ಕೋರ್ಟ್‌ ವೆಬ್‌ಸೈಟ್ ಪ್ರಕಾರ, ನ್ಯಾಯಮೂರ್ತಿ ಮಹಾದೇವನ್ ಪೀಠದ ಪರವಾಗಿ ತೀರ್ಪು ಪ್ರಕಟಿಸಲಿದ್ದಾರೆ.

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆದಿತ್ತು. ವಾದ, ಪ್ರತಿವಾದ ಆಲಿಸಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು.

ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಆದೇಶ ಹೊರಡಿಸಿದ ರೀತಿ ನೋಡಿದರೆ ಇದು ಖುಲಾಸೆಗೊಳಿಸುವ ಪ್ರಕರಣ ಎಂದು ನ್ಯಾಯಾಲಯ ನಿರ್ಧರಿಸಿದಂತೆ ಕಾಣುತ್ತಿದೆ’ ಎಂದು ಕಟುವಾಗಿ ಟೀಕಿಸಿತ್ತು. ಜುಲೈ 17ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಪೀಠವು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ವಿವೇಚನಾ ಅಧಿಕಾರವನ್ನು ಬಳಕೆ ಮಾಡಿರುವ ರೀತಿಯು ಸ್ವಲ್ಪವೂ ಒಪ್ಪುವಂತಿಲ್ಲ’ ಎಂದು ಹೇಳಿತ್ತು.

ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್‌ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣ; ಕೋಮುದ್ವೇಷ ಹೇಳಿಕೆ ಆರೋಪ, ಶಾಸಕ ಯತ್ನಾಳ್ ವಿರುದ್ಧ ದೂರು

ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ...

₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ,...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X