ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

Date:

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, ‘ಮಾಫಿ ಸಾಕ್ಷಿ’ಯ ಹೇಳಿಕೆ ದಾಖಲಿಸಿಕೊಳ್ಳುವ ಪ್ರಾಸಿಕ್ಯೂಷನ್‌ (ಸರ್ಕಾರಿ ಅಭಿಯೋಜಕರು) ನಡೆಯನ್ನು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ಪ್ರಬಲವಾಗಿ ವಿರೋಧಿಸಿದ್ದಾರೆ. ನಗರದ 59ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದ್ದು, ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನೂ ನ್ಯಾಯಪೀಠವು ಮುಂದೂಡಿದೆ.

- Advertisement -

ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗುತ್ತಿದ್ದಂತೆ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಅವರು, ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿವರ್ತನೆಯಾಗಿರುವ ಪ್ರದೂಶ್ ಅವರ ವಿಚಾರಣೆ ಪ್ರಕ್ರಿಯೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಬೇಕು ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇದಕ್ಕೆ ತಕ್ಷಣವೇ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಪರ ವಕೀಲರು, “ಮಾಫಿ ಸಾಕ್ಷಿ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶವನ್ನು ಪ್ರಶ್ನಿಸಿ ನಾವು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ. ಆದ್ದರಿಂದ, ಆ ಮೇಲ್ಮನವಿ ಸಲ್ಲಿಕೆಯಾಗುವವರೆಗೂ ಮಾಫಿ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬಾರದು” ಎಂದು ವಾದ ಮಂಡಿಸಿದರು.

ಇತ್ತಂಡಗಳ ವಾದ ಆಲಿಸಿದ ನ್ಯಾಯಾಧೀಶರು, ಪ್ರದೂಶ್‌ಗೆ ಸಮನ್ಸ್ ಜಾರಿ ಮಾಡುವ ಕುರಿತಂತೆ ಸೆಪ್ಟೆಂಬರ್ 22ರಂದು ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿ, ವಿಚಾರಣೆಯನ್ನು ಮುಂದೂಡಿದರು.

ಇದೇ ವೇಳೆ, ಪ್ರಕರಣದ ಎ-2 (ಎರಡನೇ) ಆರೋಪಿಯಾಗಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯೂ ವಿಚಾರಣೆಗೆ ಬಂದಿತು. ಆರೋಪಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಕಟುವಾಗಿ ವಾದಿಸಿದರು.

“ಕೊಲೆ ಪ್ರಕರಣದ ವಿಚಾರಣೆಯು ಪ್ರಸ್ತುತ ಅತ್ಯಂತ ಮಹತ್ವದ ಹಾಗೂ ಗಂಭೀರ ಹಂತದಲ್ಲಿದೆ. ಸಾಕ್ಷಿದಾರರ ವಿಚಾರಣೆಗಳು ನಡೆಯುತ್ತಿವೆ. ಇಂತಹ ಸೂಕ್ಷ್ಮ ಹಂತದಲ್ಲಿ ಪ್ರಮುಖ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯನಾಶ ಮಾಡುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಆತಂಕವಿರುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು” ಎಂದು ಆಕ್ಷೇಪಣೆ ಸಲ್ಲಿಸಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಜಾಮೀನು ಅರ್ಜಿಯ ಹೆಚ್ಚಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಿ ಆದೇಶ ಹೊರಡಿಸಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಶ್ವೇತಭವನ ಗೆಲ್ಲಲು 2028ರ ತನಕ ಕಾಯಬೇಕು ಡೆಮಾಕ್ರಟ್ಸ್!

ನವೆಂಬರ್ 3ರ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಭರ್ಜರಿ ಗೆಲುವು ಸಾಧಿಸಿದ್ದಾರೆ....

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...