ರೇಣುಕಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ(ಜು.24) ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.

- Advertisement -

ಸರ್ಕಾರದ ಪರ ವಿಚಾರಣೆ ನಡೆಸಿರುವ ಸುಪ್ರಿಂ ಕೋರ್ಟ್ ಜು.24 ರಂದು ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ಆರೋಪಿಗಳ ಪರ ವಕೀಲರ ವಾದ ಮಂಡನೆ ಆಲಿಸಿ, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನು ಓದಿದ್ದೀರಾ? ನೆನಪು | ಅನನ್ಯ ಪ್ರತಿಭೆಯ ಅಪ್ಪಟ ಕಲಾವಿದ ಬಾಲಕೃಷ್ಣ

ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದರು. ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು, ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಜಾಮೀನು ನೀಡುವಾಗ ಹೈಕೋರ್ಟ್‌ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾಯಮೂರ್ತಿ ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...