ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

Date:

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ದೊರೆತಿದೆ. ಪ್ರಕರಣದ 14ನೇ ಆರೋಪಿ (A14) ಪ್ರದೋಶ್‌ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸಿದ್ದ 59ನೇ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

- Advertisement -

​ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್, ಪ್ರದೋಶ್‌ಗೆ ಮಾಫಿ ಸಾಕ್ಷಿಯಾಗಲು ಕೆಳ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶವನ್ನು ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

​ದರ್ಶನ್ ಅವರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, 59ನೇ ಸಿಸಿಹೆಚ್ (CCH) ಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿದೆ. ಆದರೆ, ಪ್ರದೋಶ್ ನೀಡುವ ಮಾಫಿ ಸಾಕ್ಷಿ ಹೇಳಿಕೆಗೆ ಪೀಠವು ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂಬುದು ಗಮನಾರ್ಹ.

​ಈ ವಿಚಾರವಾಗಿ ವಿಚಾರಣಾ ನ್ಯಾಯಾಲಯದಲ್ಲಿ ಹೊಸದಾಗಿ ಮರು ವಿಚಾರಣೆ ನಡೆಸುವ ಯಾವುದೇ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಕೇವಲ ನಿಯಮಾನುಸಾರ ಮರು ಆದೇಶವನ್ನಷ್ಟೇ ಮಾಡಬೇಕಿದೆ ಎಂದು ಸೂಚಿಸಿದೆ. ಅಲ್ಲದೆ, ಮುಂದಿನ 1 ವಾರದೊಳಗೆ ಈ ಕುರಿತು ಹೊಸ ಆದೇಶ ಹೊರಡಿಸುವಂತೆ ಕೆಳ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಬೀದರ್ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಶೇ. 86.47ರಷ್ಟು ಮತ ಚಲಾವಣೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಬೀದರ್ ಜಿಲ್ಲೆಯಾದ್ಯಂತ...