ರೇಣುಕಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ, ಕಠಿಣ ಕ್ರಮದ ಬಗ್ಗೆ ನ್ಯಾಯಾಲಯದ ಎಚ್ಚರಿಕೆ

Date:

ನಟ ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಸಾಕ್ಷಿಗಳನ್ನು ಬೆದರಿಸುವ ಅಥವಾ ಅವರ ಹೇಳಿಕೆಗಳನ್ನು ತಿರುಚುವ ಯತ್ನ ನಡೆದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಎಚ್ಚರಿಕೆ ನೀಡಿದೆ.

- Advertisement -

ಮಂಗಳವಾರ ನಡೆದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಅವರು 17ನೇ ಪ್ರಮುಖ ಸಾಕ್ಷಿಯಾಗಿರುವ ತುಮಕೂರಿನ ಸಂದೀಪ್‌ ಅವರನ್ನು ಕಟಕಟೆಗೆ ಕರೆತಂದರು. ಈ ವೇಳೆ ನ್ಯಾಯಾಧೀಶರಾದ ಸುಜಾತಾ ಎಂ.ಸಾಂಬ್ರಾಣಿ ಅವರ ಮುಂದೆ ಆತಂಕ ವ್ಯಕ್ತಪಡಿಸಿದ ದುರ್ಗಾ ಬಾರ್‌ನ ಕ್ಯಾಷಿಯರ್ ಸಂದೀಪ್, ‘ಆಕರ್ಷ್ ಎಂಬ ಪರಿಚಿತನ ಮೂಲಕ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ನ್ಯಾಯಾಲಯದಲ್ಲಿ ಹೇಳಿಕೆಯನ್ನು ತಿರುಚಿ ನೀಡುವಂತೆ ಒತ್ತಡ ಹೇರಿದ್ದಾರೆ’ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಾಕ್ಷಿಯ ಈ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಬೆದರಿಕೆ ಒಡ್ಡಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಕೂಲವಾಗುವಂತೆ ಈ ಬಗ್ಗೆ ಪ್ರತ್ಯೇಕ ಪ್ರಮಾಣ ಪತ್ರ (ಅಫಿಡವಿಟ್) ಸಲ್ಲಿಸುವಂತೆ ಸಾಕ್ಷಿದಾರ ಸಂದೀಪ್‌ಗೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಅಥವಾ ಸಂಬಂಧವಿಲ್ಲದ ಯಾವುದೇ ವ್ಯಕ್ತಿಗಳು ಸಾಕ್ಷ್ಯ ನಾಶಕ್ಕೆ ಯತ್ನಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಾನ್ ಮಸಾಲ, ಗುಟ್ಕಾ ನಿಷೇಧ ಸಾಧ್ಯವೇ, ನಷ್ಟಕ್ಕೆ ಸರ್ಕಾರ ಸಿದ್ಧವಿದೆಯೇ?

ಇದೇ ವೇಳೆ ಸಾಕ್ಷಿದಾರನಿಗೆ ಅಭಯ ನೀಡಿದ ನ್ಯಾಯಾಧೀಶರು, ‘ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ನಿಮಗೆ ಭದ್ರತೆ ನೀಡಲಾಗುವುದು, ನಿಮಗೆ ತಿಳಿದಿರುವ ನೈಜ ಸಂಗತಿಯನ್ನು ನಿರ್ಭೀತಿಯಿಂದ ನ್ಯಾಯಾಲಯಕ್ಕೆ ತಿಳಿಸಿ’ ಎಂದು ಮೌಖಿಕವಾಗಿ ಧೈರ್ಯ ತುಂಬಿದರು. ಅಲ್ಲದೆ, ವಿಚಾರಣೆ ಮುಗಿಯುವವರೆಗೆ ಸಾಕ್ಷಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸುವಂತೆ ತನಿಖಾಧಿಕಾರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಮಯದ ಅಭಾವದಿಂದಾಗಿ ಮಂಗಳವಾರ ಸಾಕ್ಷಿಯ ಹೇಳಿಕೆಯನ್ನು ಭಾಗಶಃ ಮಾತ್ರ ದಾಖಲಿಸಿಕೊಳ್ಳಲಾಯಿತು. ಸಂದೀಪ್ ಅವರ ಮುಂದಿನ ಮುಖ್ಯ ವಿಚಾರಣೆ ಹಾಗೂ ಹೆಚ್ಚಿನ ಸಾಕ್ಷ್ಯಗಳ ಪ್ರಕ್ರಿಯೆಗಾಗಿ ಪ್ರಕರಣದ ವಿಚಾರಣೆಯನ್ನು ಬುಧವಾರಕ್ಕೆ (ಜುಲೈ 1) ನ್ಯಾಯಾಲಯ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...