ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ : ದಯಾನಂದ್ ಟಿ ಕೆ

Date:

  • ‘ಟೋಬಿ ಚಿತ್ರ ಚೆನ್ನಾಗಿಲ್ಲ’ ಎಂದ ಯುವತಿಗೆ ಬೆದರಿಕೆ ಹಾಕಿದ್ದ ಯುವಕನ ವಿಡಿಯೋ ವೈರಲ್ ಹಿನ್ನೆಲೆ
  • ಸಿನಿಮಾದ ಮೂಲ ಕಥೆಗಾರ ದಯಾನಂದ್ ಟಿ ಕೆ ಫೇಸ್‌ಬುಕ್ ಪೋಸ್ಟ್‌

ಶುಕ್ರವಾರ ಬಿಡುಗಡೆಯಾಗಿದ್ದ ರಾಜ್ ಬಿ ಶೆಟ್ಟಿ ಮುಖ್ಯಪಾತ್ರಧಾರಿಯಾಗಿ ನಟಿಸಿದ್ದ ‘ಟೋಬಿ’ ಸಿನಿಮಾ ನೋಡಿದ ಬಳಿಕ ‘ಚೆನ್ನಾಗಿಲ್ಲ’ ಎಂದ ಮೈಸೂರಿನ ಯುವತಿಯೋರ್ವಳಿಗೆ ಯುವಕನೋರ್ವ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟೋಬಿ ಸಿನಿಮಾದ ಮೂಲ ಕಥೆಗಾರ ದಯಾನಂದ್ ಟಿ ಕೆ, ‘ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ’ ಎಂದು ಘಟನೆಯನ್ನು ಖಂಡಿಸಿದ್ದಾರೆ.

ಮೈಸೂರಿನ ಸಂಗಂ ಥಿಯೇಟರ್ ಬಳಿ ನಡೆದ ಘಟನೆಯ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ದಯಾನಂದ್ ಟಿ ಕೆ, ‘ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ. ಚಿತ್ರ ಚೆನ್ನಾಗಿದೆ ಎಂದವರ ಅಭಿಪ್ರಾಯವನ್ನು ಗೌರವಿಸಿದಷ್ಟೇ, ಚೆನ್ನಾಗಿಲ್ಲ ಎಂದವರ ಅಭಿಪ್ರಾಯವನ್ನೂ ನಾವು ಗೌರವಿಸುತ್ತೇವೆ. ಟೋಬಿ ಚಿತ್ರತಂಡದ ಪರವಾಗಿ ಈ ವ್ಯಕ್ತಿಯ ಅಸಭ್ಯ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ‘ಟೋಬಿ ಚಿತ್ರ ಚೆನ್ನಾಗಿಲ್ಲ’ ಎಂದ ಯುವತಿಗೆ ಬೆದರಿಕೆ ಹಾಕಿದ ಯುವಕ : ವಿಡಿಯೋ ವೈರಲ್

ಮೈಸೂರಿನ ಸಂಗಂ ಥಿಯೇಟರ್ ಎದುರು ‘ಟೋಬಿ ಚೆನ್ನಾಗಿಲ್ಲ’ ಎಂದು ಡಿಜಿಟಲ್ ಮಾಧ್ಯಮವೊಂದಕ್ಕೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದ ಯುವತಿಯೋರ್ವಳಿಗೆ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ ಬೆದರಿಕೆ ಹಾಕಿದ್ದನು. ಈಗ ಇದರ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.

‘ಒಂದು ವೇಳೆ ಯುವತಿಯೇ ಮುಂದೆ ಬಂದು ದೂರು ನೀಡಿದಲ್ಲಿ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಈ ದಿನ.ಕಾಮ್ ಜೊತೆಗೆ ಮಾತನಾಡುತ್ತಾ ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್...

ಸಿನಿ ಪ್ರಿಯರ ಮನಸ್ಸು ಗೆದ್ದ ಪೃಥ್ವಿರಾಜ್ ನಟನೆಯ ನೈಜ ಕಥೆಯಾಧರಿಸಿದ ‘ಆಡು ಜೀವಿತಂ’ ಸಿನಿಮಾ

ಬಹುನಿರೀಕ್ಷಿತ ಮಲಯಾಳಂ ಚಿತ್ರ 'ಆಡು ಜೀವಿತಂ' ಅಥವಾ 'ದಿ ಗೋಟ್‌ಲೈಫ್' ಮಾರ್ಚ್...

ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ...