ಸುಶಾಂತ್‌ ಸಿಂಗ್‌ ಪ್ರಕರಣ | ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಬಳಿ ಕ್ಷಮೆಯಾಚಿಸಿದ ಝೀ ಸಂಸ್ಥೆ ಮಾಲೀಕ

Date:

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝೀ ಸಂಸ್ಥೆ ಮಾಲೀಕರಾದ ಸುಭಾಷ್‌ ಚಂದ್ರ ಅವರು ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

- Advertisement -

‘ನಮ್ಮ ಚಾನಲ್‌ನಿಂದ ದೊಡ್ಡ ಪ್ರಮಾದವಾಗಿದೆ. ನಾವೇ ಶುರು ಮಾಡಿದ ಅಪಪ್ರಚಾರ ಅಭಿಯಾನವನ್ನು ಇತರ ಚಾನಲ್‌ಗಳು ಅನುಸರಿಸಿದರು. ನಮ್ಮ ಸಂಪಾದಕರು ಹಾಗು ವರದಿಗಾರರಿಂದ ಆಗ ದೊಡ್ಡ ಪ್ರಮಾದವಾಗಿದೆ. ನಾನು ನೇರವಾಗಿ ಅದರಲ್ಲಿ ಭಾಗಿಯಾಗಿರಲಿಲ್ಲವಾದರೂ ನಾನು ರಿಯಾ ಚಕ್ರವರ್ತಿ ಅವರಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಡೀ ಅಪಪ್ರಚಾರವನ್ನು ಮೊದಲು ಶುರು ಮಾಡಿದ್ದೇ ನಮ್ಮ ಚಾನಲ್ ಎಂದು ಘೋಷಿಸಿದ್ದಾರೆ. ಅದಕ್ಕಾಗಿ ಸ್ವತಃ ಅವರು ಕ್ಷಮೆಯಾಚಿಸಿದ್ದಾರೆ. ತಮ್ಮ ಚಾನಲ್‌ನ ಸಿಬ್ಬಂದಿ ಕೂಡ ಕ್ಷಮೆ ಯಾಚಿಸಬೇಕು ಎಂದು ಸಲಹೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುಟ್ಟ ರಾಷ್ಟ್ರಗಳಿಂದ ಇಸ್ರೇಲ್, ರಷ್ಯಾ, ಅಮೆರಿಕ ಕಲಿಯುವುದು ಬಹಳಷ್ಟಿದೆ!

ಇದಕ್ಕೆಲ್ಲ ಕಾರಣವಾಗಿದ್ದು ಸುಶಾಂತ್ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖೆ ಬಳಿಕ ಸಲ್ಲಿಸಿರುವ ಮುಚ್ಚುವಿಕೆ ವರದಿ. ಅದರಲ್ಲಿ ರಿಯಾ ಚಕ್ರಬರ್ತಿ ವಿರುದ್ಧ ಯಾವುದೇ ರೀತಿಯ ಸಾಕ್ಷ್ಯ ಇಲ್ಲ. ಆಕೆ ಇದರಲ್ಲಿ ಯಾವ ರೀತಿಯಲ್ಲೂ ಆರೋಪಿಯಲ್ಲ ಎಂದು ಹೇಳಲಾಗಿತ್ತು.

ಸುಭಾಷ್‌ ಚಂದ್ರ ಅವರು 1992ರಲ್ಲಿ ಝೀ ಸಂಸ್ಥೆಯನ್ನು ಆರಂಭಿಸಿದ್ದರು. ನಂತರದಲ್ಲಿ ಬಿಜೆಪಿ ಬೆಂಬಲದಿಂದ ರಾಜ್ಯಸಭೆ ಸದಸ್ಯರಾಗಿದ್ದರು. ಸುಭಾಷ್‌ ಅವರನ್ನು ಪುನಾರಾಯ್ಕೆ ಮಾಡದ ಕಾರಣ ಸುಶಾಂತ್‌ ಸಿಂಗ್‌ ಪ್ರಕರಣದಲ್ಲಿ ತಮ್ಮ ಚಾನಲ್‌ನಲ್ಲಿ ಸುಳ್ಳುಸುದ್ದಿ ಹಬ್ಬಿಸಿದ್ದರು ಎಂದು ಹೇಳಲಾಗುತ್ತಿದೆ.

ಬಾಲಿವುಡ್‌ ನಟ ಸುಶಾಂತ್ ಸಿಂಗ್‌ ಅವರು 2020ರಲ್ಲಿ ಮುಂಬೈನ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಮಾಡಿಕೊಂಡಿದ್ದರು. ಪೊಲೀಸರು ಈ ಪ್ರಕರಣವನ್ನು ಆತ್ಮಹತ್ಯೆ ಎಂದು ವರದಿ ನೀಡಿದ ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಘಟನೆ ನಡೆದು 5 ವರ್ಷದ ನಂತರ ಸಿಬಿಐ ಸುಶಾಂತ್ ಸಿಂಗ್‌ ಅವರದು ಕೊಲೆ ಎನ್ನುವುದಕ್ಕೆ ಪ್ರಮುಖ ಸಾಕ್ಷ್ಯಗಳು ಲಭ್ಯವಾಗಲಿಲ್ಲ ಎಂಬ ಕಾರಣದಿಂದ ಮುಚ್ಚುವಿಕೆ ವರದಿ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...