ʼಆರ್‌ಆರ್‌ಆರ್‌ʼ ಚಿತ್ರದ ಖಳನಟ ರೇ ಸ್ಟೀವನ್‌ಸನ್‌ ನಿಧನ

Date:

ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ʼಆರ್‌ಆರ್‌ಆರ್‌ʼ ಚಿತ್ರದಲ್ಲಿ ಬ್ರಿಟಿಷ್‌ ಗವರ್ನರ್‌ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಐರಿಷ್‌ ನಟ ರೇ ಸ್ವೀವನ್‌ಸನ್‌ ಸೋಮವಾರ ನಿಧನರಾಗಿದ್ದಾರೆ. ಹಿರಿಯ ನಟನ ಸಾವಿನ ಸುದ್ದಿಯನ್ನು ಆಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

- Advertisement -

58 ವರ್ಷದ ಸ್ಟೀವನ್‌ ಅವರ ಸಾವಿಗೆ ಖಚಿತ ಕಾರಣಗಳೇನು ಎಂಬುದು ಈವರೆಗೆ ತಿಳಿದುಬಂದಿಲ್ಲ. ಇದೇ ಮೇ 25ರಂದು ಸ್ಟೀವನ್‌ 59ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದರು. ಹುಟ್ಟುಹಬ್ಬಕ್ಕೆ ಮೂರು ದಿನ ಬಾಕಿ ಇರುವಾಗಲೇ ನಟ ಹಠಾತ್‌ ನಿಧನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸ್ಟೀವನ್‌ ಅವರ ಹಠಾತ್‌ ನಿಧನಕ್ಕೆ ರಾಜಮೌಳಿ ಕಂಬನಿ ಮಿಡಿದಿದ್ದು, “ಈ ಸುದ್ದಿ ನಿಜಕ್ಕೂ ಅಘಾತವನ್ನುಂಟು ಮಾಡಿದೆ. ರೇ ಚಿತ್ರೀಕರಣದ ಸಂದರ್ಭದಲ್ಲಿ ಸದಾ ಚೈತನ್ಯದಿಂದ ಇರುತ್ತಿದ್ದರು. ಅವರ ಸಾಮರ್ಥ್ಯ ಮತ್ತು ಲವಲವಿಕೆಯ ವ್ಯಕ್ತಿತ್ವ ಚಿತ್ರತಂಡಕ್ಕೆ ಸ್ಫೂರ್ತಿಯಾಗಿತ್ತು. ಅವರ ಜೊತೆ ಕೆಲಸ ಮಾಡಿದ ಅನುಭವ ನಿಜಕ್ಕೂ ಖುಷಿ ನೀಡುವಂಥದ್ದು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್‌ ಮಾಡಿದ್ದಾರೆ.

ʼಆರ್‌ಆರ್‌ಆರ್‌ʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ತೆಲುಗಿನ ಖ್ಯಾತ ನಟರಾದ ಜೂನಿಯರ್‌ ಎನ್‌ಟಿಆರ್‌ ಮತ್ತು ರಾಮ್‌ ಚರಣ್‌ ಇಬ್ಬರೂ ಸ್ಟೀವನ್‌ ಜೊತೆಗೆ ಕೆಲಸ ಮಾಡಿದ ಅನುಭವವನ್ನು ಮೆಲುಕು ಹಾಕಿ, ಟ್ವೀಟ್‌ ಮೂಲಕ ನಟನ ಅಗಲಿಕೆ ಕಂಬನಿ ಮಿಡಿದಿದ್ದಾರೆ.

1998ರಲ್ಲಿ ತೆರೆಕಂಡ ಪೌಲ್‌ ಗ್ರೀನ್‌ಗ್ರಾಸ್‌ ನಿರ್ದೇಶನದ ʼದಿ ಥಿಯರಿ ಆಫ್‌ ಫ್ಲೈಟ್‌ʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಹಾಲಿವುಡ್‌ ಪ್ರವೇಶಿಸಿದ ಸ್ಟೀವನ್‌, ʼಕಿಂಗ್‌ ಆರ್ಥರ್‌ʼ, ʼಪನಿಷರ್‌ : ವಾರ್‌ಝೋನ್‌ʼ, ʼಕಿಲ್‌ ದಿ ಐರಿಷ್‌ಮ್ಯಾನ್‌, ʼಥಾರ್‌ʼ, ʼಆರ್‌ಆರ್‌ಆರ್‌ʼ ಸೇರಿದಂತೆ 26ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ʼವೈಕಿಂಗ್ಸ್‌ʼ, ʼಬ್ಲ್ಯಾಕ್‌ ಸೇಲ್ಸ್‌ʼ, ʼಸೇಂಟ್ಸ್‌ ಆಂಡ್‌ ಸ್ಟ್ರೇಂಜರ್ಸ್‌ʼ ಸೇರಿದಂತೆ 30ಕ್ಕೂ ಹೆಚ್ಚು ಜನಪ್ರಿಯ ವೆಬ್‌ ಸರಣಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...