ಡೀಪ್‌ಫೇಕ್ ಫೋಟೊ; ಕಾನೂನು ಕ್ರಮಕ್ಕೆ ಮುಂದಾದ ನಟಿ ರುಕ್ಮಿಣಿ ವಸಂತ್

Date:

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ತಮ್ಮ ಅಶ್ಲೀಲ ನಕಲಿ (ಡೀಪ್‌ಫೇಕ್) ಚಿತ್ರಗಳ ಕುರಿತು ಕನ್ನಡದ ಜನಪ್ರಿಯ ನಟಿ ರುಕ್ಮಿಣಿ ವಸಂತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

- Advertisement -

ಇತ್ತೀಚೆಗೆ ಅಂತರ್ಜಾಲದಲ್ಲಿ ರುಕ್ಮಿಣಿ ವಸಂತ್ ಅವರ ಮುಖವನ್ನು ಬಳಸಿ ತಿರುಚಲಾದ (ಮಾರ್ಫ್ ಮಾಡಿದ) ಚಿತ್ರಗಳು ವ್ಯಾಪಕವಾಗಿ ಹರಿದಾಡುತ್ತಿದ್ದವು. ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ನಟಿ, ವೈರಲ್ ಆಗುತ್ತಿರುವ ಚಿತ್ರಗಳು ಸಂಪೂರ್ಣ ನಕಲಿಯಾಗಿದ್ದು, ಎಐ ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಲಾದ ‘ಡೀಪ್‌ಫೇಕ್’ ಚಿತ್ರಗಳಾಗಿವೆ ಎಂದು ತಿಳಿಸಿದ್ದಾರೆ. ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯರ ತೇಜೋವಧೆ ಮಾಡುವ ಇಂತಹ ಕೀಳು ಮಟ್ಟದ ಕೃತ್ಯಗಳನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

“ನನ್ನ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಸೃಷ್ಟಿಸಲಾದ ಈ ನಕಲಿ ಚಿತ್ರಗಳ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ನನ್ನ ಕಾನೂನು ತಂಡವು ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಈ ಅಸಹ್ಯಕರ ಚಿತ್ರಗಳನ್ನು ಸೃಷ್ಟಿಸಿದವರು ಮತ್ತು ಅವುಗಳನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ರುಕ್ಮಿಣಿ ವಸಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಗಾಝಾ ಮೇಲಿನ ಇಸ್ರೇಲ್‌ ಕ್ರೌರ್ಯಕ್ಕೆ ಜಾಗತಿಕ ಆಕ್ರೋಶ; ಮೋದಿಯ ಮೌನವೇಕೆ?

ಇದರ ಜೊತೆಗೆ, ಇಂತಹ ತಿರುಚಲಾದ ಸುಳ್ಳು ಚಿತ್ರಗಳು ಅಂತರ್ಜಾಲದಲ್ಲಿ ಅಥವಾ ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಂಡುಬಂದರೆ, ತಕ್ಷಣವೇ ಆ ಖಾತೆಗಳನ್ನು ‘ರಿಪೋರ್ಟ್’ ಮಾಡುವಂತೆ ಅವರು ತಮ್ಮ ಅಭಿಮಾನಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ದುರ್ಬಳಕೆ ಮಿತಿಮೀರುತ್ತಿದ್ದು, ಸೆಲೆಬ್ರಿಟಿಗಳ ಮುಖವನ್ನು ಬೇರೊಬ್ಬರ ದೇಹಕ್ಕೆ ಅಂಟಿಸುವ ‘ಡೀಪ್‌ಫೇಕ್’ ಹಾವಳಿ ಆತಂಕಕಾರಿ ಮಟ್ಟಕ್ಕೆ ತಲುಪಿದೆ. ಈ ಹಿಂದೆ ಬಾಲಿವುಡ್ ಮತ್ತು ದಕ್ಷಿಣ ಭಾರತದ ಹಲವು ಪ್ರಮುಖ ನಟಿಯರು ಕೂಡ ಇದೇ ರೀತಿಯ ಸೈಬರ್ ಕಿರುಕುಳಕ್ಕೆ ಒಳಗಾಗಿದ್ದರು. ಇದೀಗ ರುಕ್ಮಿಣಿ ವಸಂತ್ ಪ್ರಕರಣವು ಸೈಬರ್ ಅಪರಾಧಿಗಳ ವಿರುದ್ಧ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವ ಅಗತ್ಯವನ್ನು ಮತ್ತೊಮ್ಮೆ ಎತ್ತಿತೋರಿಸಿದೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ರಾಮಾಯಣ’ ಬಜೆಟ್‌ನ ಕೇವಲ ಶೇ. 9ರಷ್ಟು ವೆಚ್ಚದಲ್ಲಿ ನಿರ್ಮಾಣ: ಅಮೆರಿಕದಲ್ಲಿ ‘ಯಶ್‌’ ಚಿತ್ರವನ್ನೇ ಹಿಂದಿಕ್ಕಿದ ‘ಗಾಡ್ಜಿಲ್ಲಾ’

ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಎರಡು ಚಿತ್ರಗಳ ನಡುವೆ ಕುತೂಹಲಕಾರಿ ಪೈಪೋಟಿ ಏರ್ಪಟ್ಟಿದ್ದು,...

ಶೈನ್ ಶೆಟ್ಟಿಯ ‘ಶಂಕರಾಭರಣ’ ಟ್ರೇಲರ್‌ಗೆ ಪ್ರೇಕ್ಷಕರಿಂದ ಮೆಚ್ಚುಗೆ; ನವೆಂಬರ್ 20ಕ್ಕೆ ಸಿನಿಮಾ ಬಿಡುಗಡೆ!

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಸಜ್ಜಾಗಿರುವ ನಟ...

ತುಷಾರ್ ಕಪೂರ್ ಬೆನ್ನಲ್ಲೇ ಆಯುಷ್ಮಾನ್ ಖುರಾನಾಗೆ ಬೆದರಿಕೆ: ‘ಬಿಷ್ಣೋಯ್ ಗ್ಯಾಂಗ್’ ಹೆಸರಲ್ಲಿ ಹಫ್ತಾಗೆ ಬೇಡಿಕೆ

ಬಾಲಿವುಡ್‌ ತಾರೆಯರಿಗೆ ಬೆದರಿಕೆ ಕರೆಗಳ ಸರಮಾಲೆ ಮುಂದುವರಿದಿದ್ದು, ನಟ ತುಷಾರ್ ಕಪೂರ್...

‘SIR ಹೋರಾಟದಲ್ಲಿ ನೀವೇಕೆ ಭಾಗವಹಿಸಿದಿರಿ’; ಬೇಷರತ್ ಕ್ಷಮೆ ಕೇಳುವಂತೆ ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಸೂಚನೆ

ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮುಂಬೈನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದಕ್ಕೆ...