ಅಂಬರೀಶ್‌ ಸ್ಮಾರಕ | ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ ಎಂದ ಚೇತನ್‌

Date:

  • ಮಾರ್ಚ್‌ 27ರಂದು ಲೋಕಾರ್ಪಣೆಗೊಂಡಿರುವ ಅಂಬರೀಶ್‌ ಸ್ಮಾರಕ
  • ಸುಮಲತಾ ಸರ್ಕಾರದ ಎದುರು ಕೈಚಾಚಿದ್ದು ವಿಪರ್ಯಾಸ ಎಂದ ನಟ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮರಣಾರ್ಥ ಸ್ಮಾರಕ ಲೋಕಾರ್ಪಣೆಗೊಂಡ ಬೆನ್ನಲ್ಲೇ ಕನ್ನಡದ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌, ಸ್ಮಾರಕ ನಿರ್ಮಾಣಕ್ಕೆ ಜನಸಾಮಾನ್ಯರ ತೆರಿಗೆ ಹಣವನ್ನು ಬಳಸಿದ್ದನ್ನು ಪ್ರಶ್ನಿಸಿ ಅಂಬರೀಶ್‌ ಕುಟುಂಬಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಮಾರಕ ಲೋಕಾರ್ಪಣೆ ಸಂದರ್ಭದಲ್ಲಿ, “ಅಂಬರೀಶ್ ಯಾರ ಬಳಿಯೂ ಕೈ ಚಾಚಿದವರಲ್ಲ” ಎಂದು ಸುಮಲತಾ ಅವರು ಹೇಳಿರುವ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಚೇತನ್‌, “ಅಂಬರೀಶ್ ಯಾರ ಬಳಿಯೂ ಕೈ ಚಾಚಿದವರಲ್ಲ ಎಂದು ಸುಮಲತಾ ಹೇಳಿದ್ದಾರೆ. (ಅನಗತ್ಯ) ಅಂಬರೀಶ್ ಸ್ಮಾರಕಕ್ಕೆ ಸುಮಲತಾರವರು ಅಂದಾಜು ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಕೈ ಚಾಚಿ ಪಡೆದಿರುವುದು ವಿಪರ್ಯಾಸ. ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಬದಲು ಸುಮಲತಾ ಅವರು ತಮ್ಮ ಸ್ವಂತ 23.4 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ? ಎಲ್ಲ ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ?” ಎಂದು ಪ್ರಶ್ನಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ 37 ಗುಂಟೆ ಜಾಗದಲ್ಲಿ ಅಂಬರೀಶ್‌ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಅಂದಾಜು 12 ಕೋಟಿ ವೆಚ್ಚ ತಗುಲಿದೆ ಎನ್ನಲಾಗಿದ್ದು, ಅಂಬರೀಶ್‌ ಕುಟುಂಬಸ್ಥರ ಸಮ್ಮುಖದಲ್ಲಿ ಮಾರ್ಚ್‌ 27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮಾರಕವನ್ನು ಉದ್ಘಾಟಿಸಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಗೆ ಅಂಬರೀಶ್‌ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ...