ನಟ ಮಾಸ್ಟರ್‌ ಆನಂದ್‌ಗೆ ₹18 ಲಕ್ಷ ವಂಚನೆ

Date:

  • 70 ಲಕ್ಷ ಮೌಲ್ಯದ ನಿವೇಶನ ಖರೀದಿಸಿದ್ದ ಆನಂದ್‌
  • ಆನಂದ್‌ ಖರೀದಿಸಿದ್ದ ನಿವೇಶನ ಬೇರೆಯವರ ಪಾಲು

ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಮಾಸ್ಟರ್‌ ಆನಂದ್‌ ಖಾಸಗಿ ಕಂಪನಿಯಿಂದ ವಂಚನೆಗೊಳಗಾಗಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ನಿವೇಶನ ಖರೀದಿಸಲು ಪಾವತಿಸಿದ್ದ ಮುಂಗಡ ಹಣವನ್ನು ವಾಪಸ್ ನೀಡದೆ ಕಂಪನಿ ವಂಚಿಸಿದೆ ಎಂದು ನಟ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

ಕೆಲ ವರ್ಷಗಳ ಹಿಂದೆ ಮಲ್ಟಿ ಲೀಪ್‌ ವೆಂಚರ್‌ ಹೆಸರಿನ ಕಂಪನಿ ಬೆಂಗಳೂರಿನ ಹೊರವಲಯದಲ್ಲಿರುವ ಕೊಮಘಟ್ಟ ಸಮೀಪದ ರಾಮಸಂದ್ರದಲ್ಲಿ ಅಭಿವೃದ್ಧಿ ಪಡಿಸಿದ್ದ 2 ಸಾವಿರ ಅಡಿ ವಿಸ್ತೀರ್ಣದ ನಿವೇಶನವನ್ನು ₹70 ಲಕ್ಷ ಮೊತ್ತಕ್ಕೆ ಖರೀದಿ ಮಾಡಿದ್ದರು. ₹18.50 ಲಕ್ಷವನ್ನು ಮುಂಗಡವಾಗಿ ಪಾವತಿಸಿದ್ದ ಆನಂದ್‌, ಉಳಿದ ಮೊತ್ತವನ್ನು ಕಂಪನಿಯ ಸಲಹೆಯಂತೆ ಕಂತಿನ ಪ್ರಕಾರ ಪಾವತಿಸಲು ಒಪ್ಪಿಕೊಂಡಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮುಂಗಡ ಹಣ ಪಡೆದ ಕಂಪನಿಯವರು ಆನಂದ್‌ ಮತ್ತು ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಕರಾರು ಪತ್ರವನ್ನು ಕೂಡ ನೀಡಿದ್ದರು. ಆದರೆ, ಸ್ವಲ್ಪ ದಿನಗಳ ಬಳಿಕ ಆನಂದ್‌ ಅವರಿಗೆ ನೀಡಲಾಗಿದ್ದ ನಿವೇಶನವನ್ನು ಅವರ ಗಮನಕ್ಕೆ ತರದೇ ಕಂಪನಿಯವರು ಬೇರೆಯವರಿಗೆ ಮಾರಾಟ ಮಾಡಿದ್ದಾರೆ. 2020ರ ಸೆಪ್ಟೆಂಬರ್‌ನಲ್ಲೇ ಈ ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? 19ನೇ ಸಿನಿಮಾ ಘೋಷಣೆಗೆ ಸಜ್ಜಾದ ಯಶ್‌

ತಾವು ಖರೀದಿಸಿದ ನಿವೇಶನವನ್ನು ಹೇಳದೆ ಕೇಳದೆ ಬೇರೆಯವರಿಗೆ ಮಾರಾಟ ಮಾಡಿದ್ದನ್ನು ಆನಂದ್‌ ದಂಪತಿ ಆಗಲೇ ಪ್ರಶ್ನಿಸಿದ್ದಾರೆ. ಅದಕ್ಕೆ ನೆಪ ಹೇಳಿದ್ದ ಕಂಪನಿಯವರು ಮುಂಗಡ ಹಣ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಎರಡ್ಮೂರು ವರ್ಷಗಳು ಕಳೆದರೂ ₹18.50 ಲಕ್ಷ ಹಣದಲ್ಲಿ ಒಂದು ರೂಪಾಯಿಯನ್ನು ಕೂಡ ಹಿಂತಿರುಗಿಸಿಲ್ಲ. ಹೀಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ವಂಚನೆ ಆರೋಪದಡಿ ದೂರು ದಾಖಲಿಸಿದ್ದು, ದೂರಿನನ್ವಯ ಕಂಪನಿ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...