ಚೆಕ್‌ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೆಜಿಎಫ್, ಮುಂಗಾರು ಮಳೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಧೀಶರ ಎದುರು ಅಶ್ವಥ್ ಅವರು ತಪ್ಪು ಒಪ್ಪಿಕೊಂಡು ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಆದ ಕಾರಣ ನೀನಾಸಂ ಅಶ್ವತ್ಥ್ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.
ಹಾಸನ ಮೂಲದ ರೋಹಿತ್ ಎಂಬುವರಿಂದ ಹಸುಗಳನ್ನು ಖರೀದಿ ಮಾಡಿ ಅವರಿಗೆ 1.50 ಲಕ್ಷ ರೂ.ಗಳ ಚೆಕ್‌ಅನ್ನು ನೀನಾಸಂ ಅಶ್ವಥ್ ನೀಡಿದ್ದರು. ನಂತರ ರೋಹಿತ್ ಆ ಚೆಕ್ ಅನ್ನು ಬ್ಯಾಂಕ್‌ಗೆ ವರ್ಗಾಯಿಸಿದಾಗ ಬೌನ್ಸ್ ಆಗಿರುವುದು ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ವಿದ್ಯುತ್ ವೈರಿಂಗ್ ಪರಿಶೀಲಿಸಿದ್ದಕ್ಕೆ ದಲಿತ ವ್ಯಕ್ತಿಗೆ ಚಪ್ಪಲಿ ನೆಕ್ಕಿಸಿದ ಲೈನ್‌ಮೆನ್
ಈ ಸಂಬಂಧ ಹಾಸನದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದ ರೋಹಿತ್ ಅವರು ನ್ಯಾಯಾಲಯದಿಂದ ನಾಲ್ಕು ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ ಕೋರ್ಟಿಗೆ ಅಶ್ವಥ್ ಹಾಜರಾಗಿರಲಿಲ್ಲ.
ಐದನೆ ಬಾರಿ ಬಂಧನ ವಾರೆಂಟ್ ಜಾರಿಗೊಳಿಸಿದ ಹಿನ್ನಲೆಯಲ್ಲಿ ಹಾಸನ ಬಡಾವಣೆ ಠಾಣೆ ಪೊಲೀಸರು ಅಶ್ವಥ್ ಅವರನ್ನು ಬಂಧಿಸಿ ಶನಿವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಹಸುಗಳ ಖರೀದಿ ಬಗ್ಗೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡು ಶೇ.25ರಷ್ಟು ಹಣ ಪಾವತಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಅದರಂತೆ ಅಶ್ವತ್ಥ್ ಅವರು ಸ್ಥಳದಲ್ಲಿಯೇ ಹಣ ಪಾವತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಶ್ವಥ್ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಉಳಿದ ಹಣವನ್ನು ನೀಡಲು ಸಮಯಾವಕಾಶವನ್ನು ಪಡೆದುಕೊಂಡಿದ್ದಾರೆ.