ಗಣಪ, ಕರಿಯ 2 ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
34ರ ಸಂತೋಷ್ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ
ಕಳೆದ ತಿಂಗಳು ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಅವರು ಕಾಮಾಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಪಡೆದಿದ್ದರು. ಆದರೆ ಕೆಲವು ದಿನಗಳ ಹಿನ್ನೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು.
ಕೆಂಪ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಆಗಮಿಸಿದ್ದ ಸಂತೋಷ್ ಅವರು, ಗಣಪ, ಬರ್ಕ್ಲಿ, ಕರಿಯಾ-2, ಸತ್ಯ, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಂತೋಷ್ ಅವರ ತಂದೆ ಅನೇಕಲ್ ಬಾಲರಾಜ್ ಅವರು ನಟ ದರ್ಶನ್ ಅವರ ಹಿಟ್ ಸಿನಿಮಾ ಕರಿಯ ಸಿನಿಮಾ ನಿರ್ಮಾಣ ಮಾಡಿದ್ದರು.
