ರಾಹುಲ್‌ ಗಾಂಧಿ ಅನರ್ಹ | ವಿನಾಶಕಾಲೇ ವಿಪರೀತ ಬುದ್ಧಿ ಎಂದ ಕವಿರಾಜ್‌

Date:

ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಕನ್ನಡ ಚಿತ್ರರಂಗದ ಖ್ಯಾತ ಚಿತ್ರಸಾಹಿತಿ ಕವಿರಾಜ್‌ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ಇದು ಸರ್ವಾಧಿಕಾರದ ಲಕ್ಷಣ ಎಂದು ಕಿಡಿ ಕಾರಿದ್ದಾರೆ.

- Advertisement -

ರಾಹುಲ್‌ ಗಾಂಧಿ ಅನರ್ಹತೆಗೆ ಸಂಬಂಧಿಸಿ ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಕವಿರಾಜ್‌, “ಸರ್ವಾಧಿಕಾರ ಬಲವಾಗಿಯೇ ಪ್ರತಿಷ್ಠಾಪನೆಗೊಳ್ಳುತ್ತಿದೆ. ಸರ್ವಾಧಿಕಾರದ ಮುಖ್ಯ ಲಕ್ಷಣವೇ ವಿರೋಧಿಗಳ ಬಂಧನ, ಅವರ ಸ್ಥಾನಮಾನಗಳ ಹರಣ. ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ. ಸರ್ಕಾರಿ ಸಂಸ್ಥೆಗಳ ಅಧಿಕಾರ ದುರುಪಯೋಗ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವ ಹಾಗೆ ಎಲ್ಲಕ್ಕೂ ಕಾಲವೇ ಉತ್ತರಿಸುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೇವಲ ಕವಿರಾಜ್‌ ಮಾತ್ರವಲ್ಲ ಬಾಲಿವುಡ್‌ ನಟಿ ಸ್ವರಾ ಭಾಸ್ಕರ್‌ ಕೂಡ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ರಾಹುಲ್‌ ಗಾಂಧಿ ಅರ್ನಹತೆಯ ವರದಿಯನ್ನು ಹಂಚಿಕೊಂಡು ಟ್ವೀಟ್‌ ಮಾಡಿರುವ ಅವರು, “ಒಂದು ಕಾಲದಲ್ಲಿ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ರಷ್ಯಾ, ಟರ್ಕಿಯಂತಹ ದೇಶಗಳಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಓದುತ್ತಿದ್ದೆವು. ಆದರೆ, ಈಗ ಪ್ರಜಾತಾಂತ್ರಿಕ ಮಾರ್ಗದಲ್ಲಿ ಚುನಾಯಿತಗೊಂಡ ಸರ್ಕಾರ ಅದೇ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶಗೊಳಿಸುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಅಂತಹ ದೇಶಗಳ ಸಾಲಿಗೆ ಭಾರತವೂ ಸೇರಿಕೊಂಡಿದೆ” ಎಂದು ಬೇಸರಿಸಿದ್ದಾರೆ.

ರಾಹುಲ್‌ ಗಾಂಧಿಯವರ ಅನರ್ಹತೆ ವರದಿಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಈ ಬೆಳವಣಿಗೆಯನ್ನು ವಿರೋಧಿಸಿ ಟ್ವೀಟ್‌ ಮಾಡಿರುವ ಬಹುಭಾಷಾ ನಟ ಪ್ರಕಾಶ್‌ ರಾಜ್‌, “ಈ ರೀತಿ ಕೀಳುಮಟ್ಟದ, ಪ್ರಗತಿಗೆ ಮಾರಕವಾಗುಂತಹ ರಾಜಕಾರಣ ಮಾಡಲು‌ ನಾಚಿಕೆಯಾಗಬೇಕು. ಇದು ದೇಶಕ್ಕಾಗಿ ನಾವೆಲ್ಲರೂ ಧ್ವನಿ ಎತ್ತ ಬೇಕಿರುವ ಸಂದರ್ಭ. ಇಂತಹ ಹೊತ್ತಿನಲ್ಲಿ ನಾವು ಸುಮ್ಮನೆ ಕೂತರೆ, ಇವತ್ತಿನ ನಮ್ಮ ಮೌನಕ್ಕೆ ನಾಳೆ ದಿನ ನಾವೇ ದುಬಾರಿ ಬೆಲೆ ತೆರಬೇಕಾಗುತ್ತದೆ” ಎಂದು ಜನ ಸಾಮಾನ್ಯರನ್ನು ಎಚ್ಚರಿಸಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...