ʼಕಾಟೇರಾʼ ಚಿತ್ರದ ಮೂಲಕ ತೆರೆಗೆ ಮರಳಲು ಸಜ್ಜಾದ ಕುಮಾರ್‌ ಗೋವಿಂದ್‌

Date:

60ನೇ ವಸಂತಕ್ಕೆ ಕಾಲಿಟ್ಟ ಹಿರಿಯ ನಟ

- Advertisement -

ಹುಟ್ಟು ಹಬ್ಬಕ್ಕೆ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ಮಾಪಕ ಕುಮಾರ್‌ ಗೋವಿಂದ್‌ ಬುಧವಾರ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ಅಂತರ ಕಾಯ್ದುಕೊಂಡಿರುವ ಅವರು ಇದೀಗ ಮತ್ತೆ ಚಿತ್ರರಂಗದತ್ತ ಮುಖ ಮಾಡಿದ್ದು, ದರ್ಶನ್‌ ಮುಖ್ಯಭೂಮಿಕೆಯ ʼಕಾಟೇರಾʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತ ಕುಮಾರ್‌ ಗೋವಿಂದ್‌ ಅವರ ಪಾತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ ಮಾಡಿರುವ ಚಿತ್ರತಂಡ ಹಿರಿಯ ನಟನಿಗೆ ಶುಭಾಶಯ ಕೋರಿದೆ.

ಟ್ವಿಟರ್‌ನಲ್ಲಿ ಕುಮಾರ್‌ ಗೋವಿಂದ್‌ ಅವರ ಫಸ್ಟ್‌ಲುಕ್‌ ಪೋಸ್ಟರ್‌ ಹಂಚಿಕೊಂಡಿರುವ ʼಕಾಟೇರಾʼ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌, ಹುಟ್ಟು ಶುಭಾಶಯ ಕೋರುವ ಜೊತೆಗೆ ಚಿತ್ರದಲ್ಲಿ ಕುಮಾರ್‌ ಗೋವಿಂದ್‌ ಹಳ್ಳಿಗ ಮಹದೇವಣ್ಣನ ಪಾತ್ರದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ.

70ರ ದಶಕದ ಹಳ್ಳಿ ಸೊಗಡಿನ ಕಥಾಹಂದರವುಳ್ಳ ʼಕಾಟೇರಾʼ ಚಿತ್ರದಲ್ಲಿ ದರ್ಶನ್‌ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ಈ ಚಿತ್ರದ ಮೂಲಕ ನಾಯಕ ನಟಿಯಾಗಿ ಚಿತ್ರರಂಗ ಪ್ರವೇಶಿಸುತ್ತಿರುವುದು ವಿಶೇಷ.

ಇತ್ತೀಚೆಗೆ ರೈತ ನಾಯಕ, ದಿವಂಗತ ಪುಟ್ಟಣ್ಣಯ್ಯನವರ ಮಗನ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ʼಕಾಟೇರಾʼ ಚಿತ್ರದ ಕಥಾಹಂದರದ ಬಗ್ಗೆ ಸುಳಿವು ನೀಡಿದ್ದ ದರ್ಶನ್‌, “70ರ ದಶಕದಲ್ಲಿ ಜಾರಿಯಾದ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ, ಆ ಕ್ಷಣದಿಂದ ಚುರುಕುಗೊಂಡ ರೈತ ಹೋರಾಟದ ಸುತ್ತ ನಾವು ಸಿನಿಮಾ ಮಾಡುತ್ತಿದ್ದೇವೆ” ಎಂದು ಮಾಹಿತಿ ಹಂಚಿಕೊಂಡಿದ್ದರು.

ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ರಾಕ್‌ಲೈನ್‌ ವೆಂಕಟೇಶ್‌ ಬಂಡವಾಳ ಹೂಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸದ್ಯ ಚಿತ್ರದ ಮೊದಲ ಹಂತದ ಶೂಟಿಂಗ್‌ ಚಾಲ್ತಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...