ಹಿರಿಯ ನಟ ಶರತ್‌ ಬಾಬು ಆರೋಗ್ಯದಲ್ಲಿ ಚೇತರಿಕೆ

Date:

ಶರತ್‌ ಬಾಬು ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಿದ್ದ ಕಿಡಿಗೇಡಿಗಳು

- Advertisement -

ಸಂತಾಪ ಸೂಚಿಸಿದ್ದ ಖುಷ್ಬೂ ಸುಂದರ್‌, ಕಮಲ್‌ ಹಾಸನ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಹುಭಾಷಾ ನಟ ಶರತ್‌ ಬಾಬು ಬುಧವಾರ ತಡರಾತ್ರಿ ನಿಧನರಾಗಿದ್ದಾರೆಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಈ ವದಂತಿಯನ್ನು ತಳ್ಳಿ ಹಾಕಿರುವ ನಟನ ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಶರತ್‌ ಬಾಬು ಆರೋಗ್ಯ ಸ್ಥಿತಿಯ ಬಗ್ಗೆ ಅವರ ಸಹೋದರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಶರತ್‌ ಬಾಬು ಅವರ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು. ಅವರ ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಸುಧಾರಣೆ ಕಂಡುಬಂದಿದೆ. ಶೀಘ್ರದಲ್ಲೇ ಅವರು ಗುಣಮುಖರಾಗಲಿದ್ದಾರೆ. ದಯವಿಟ್ಟು ಯಾರೂ ವದಂತಿಗಳನ್ನು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ.

ಏಪ್ರಿಲ್‌ ಮೊದಲ ವಾರದಲ್ಲಿ ಶರತ್‌ ಬಾಬು ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆಗ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಚೇತರಿಕೆ ಕಾಣುತ್ತಲೇ ಹೈದರಾಬಾದ್‌ನ ʼಎಐಜಿʼ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸದ್ಯ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಯುತ್ತಿದ್ದು, ನಟನ ಸ್ಥಿತಿ ಸುಧಾರಿಸಿದೆ ಎನ್ನಲಾಗಿದೆ.

1973ರಲ್ಲಿ ತೆರೆಕಂಡ ತೆಲುಗಿನ ʼರಾಮ ರಾಜ್ಯಂʼ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ ಶರತ್‌ ಬಾಬು, 4 ದಶಕಗಳ ಸಿನಿ ಪಯಣದಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕೇವಲ ತೆಲುಗು ಮಾತ್ರವಲ್ಲದೆ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲೂ ಅವರು ಗುರುತಿಸಿಕೊಂಡಿದ್ದರು. ʼಶಕ್ತಿʼ, ʼರಣಚಂಡಿʼ, ʼಕಂಪನʼ, ʼಗಾಯʼ, ʼತುಳಸಿ ದಳʼ, ʼಹೃದಯ-ಹೃದಯʼ, ʼನೀಲʼ, ʼನಮ್ಮೆಜಮಾನ್ರುʼ, ʼಅಮೃತ ವರ್ಷಿಣಿʼ ಮುಂತಾದ ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡದಲ್ಲೂ ಭಾರೀ ಜನಪ್ರಿಯತೆ ಗಳಿಸಿದ್ದರು.

ಶರತ್‌ ಬಾಬು ಅವರ ನಿಧನದ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಖ್ಯಾತ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್‌, ತಮಿಳಿನ ಸ್ಟಾರ್‌ ನಟ ಕಮಲ್‌ ಹಾಸನ್‌ ಸೇರಿದಂತೆ ಹಲವರು ಹಿರಿಯ ನಟನಿಗೆ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ. ಸುಳ್ಳು ಸುದ್ದಿಯ ಬಗ್ಗೆ ತಿಳಿಯುತ್ತಲೇ ಟ್ವೀಟ್‌ಗಳನ್ನು ಡಿಲೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ಧನ್ವೀರ್ ಗೌಡ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ ದೂರು ದಾಖಲು!

ಕನ್ನಡ ಚಿತ್ರರಂಗದ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ...

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...