ಕನ್ನಡ ಸಿನಿಮಾ ನಿರ್ದೇಶಕ ಎ ಟಿ ರಘು ನಿಧನ; ಅಂಬರೀಷ್‌ ಅವರ 27 ಚಿತ್ರಗಳಿಗೆ ಆ್ಯಕ್ಷನ್‌ ಕಟ್

Date:

ಹಿರಿಯ ಕನ್ನಡ ಚಿತ್ರ ನಿರ್ದೇಶಕ ಎ ಟಿ ರಘು ಅವರು ನಿಧನರಾಗಿದ್ದಾರೆ. ‘ಮಂಡ್ಯದ ಗಂಡು’ ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದರು. ಅವರ ನಿಧನದಿಂದ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

- Advertisement -

ರಘು ಅವರಿಗೆ 76 ವರ್ಷ ವಯಸ್ಸಾಗಿತ್ತು. ಗುರುವಾರ (ಮಾರ್ಚ್​ 20) ರಾತ್ರಿ ಅವರು ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಿದ್ದ ಅವರು ನಿರಂತರವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಸದ್ಯ ಬೆಂಗಳೂರಿನ ಆರ್​ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ. ಇಂದು (ಮಾರ್ಚ್ 21) ಮದ್ಯಾಹ್ನ 2 ಗಂಟೆ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಎ ಟಿ ರಘು ಅವರು ಕೊಡಗಿನಲ್ಲಿ ಜನಿಸಿದ್ದರು. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕರನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕೊರತೆಗಳ ನಡುವೆಯೂ ಫಿಲ್ಮ್ ಫೆಸ್ಟಿವಲ್ ಯಶಸ್ವಿ

1980ರಲ್ಲಿ ಬಿಡುಗಡೆಯಾದ ಅಂಬರೀಷ್‌ ನಟನೆಯ ‘ನ್ಯಾಯ ನೀತಿ ಧರ್ಮ’ ಚಿತ್ರ ನಿರ್ದೇಶಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದರು. ಈ ಸಿನಿಮಾ ಮೂಲಕ ಅಂಬರೀಷ್ ಜೊತೆ ರಘು ಅವರಿಗೆ ಒಳ್ಳೆಯ ಒಡನಾಟ ಬೆಳೆಯಿತು.

ಅಂಬರೀಷ್ ನಟನೆಯ ‘ಆಶ’, ‘ಅವಳ ನೆರಳು’, ‘ಮಂಡ್ಯದ ಗಂಡು’, ‘ಮಿಡಿದ ಹೃದಯಗಳು’ ಸೇರಿ 27 ಸಿನಿಮಾಗಳನ್ನು ರಘು ನಿರ್ದೇಶಿಸಿದ್ದರು.

ರಘು ಅವರು ಹಿಂದಿ, ಮಲಯಾಳಂ ಚಿತ್ರರಂಗದಲ್ಲೂ ಕೆಲಸ ಮಾಡಿದ್ದಾರೆ. ‘ಆಶಾ’ ಚಿತ್ರವನ್ನು ಅವರು ಹಿಂದಿಗೆ ‘ಮೆರಿ ಅದಾಲತ್’ ಹೆಸರಿನಲ್ಲಿ ರಿಮೇಕ್ ಮಾಡಿದರು. ಇದರಲ್ಲಿ ರಜನಿಕಾಂತ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ 1984ರಲ್ಲಿ ಬಿಡುಗಡೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...