ಬಿಸಿಗಾಳಿ | ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಶಾರೂಖ್ ಖಾನ್

Date:

ಮಂಗಳವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ವೀಕ್ಷಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಶಾರುಖ್ ಖಾನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾಲೀಕರೂ ಆಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಿನ್ನೆ ಸೋಲಿಸುವ ಮೂಲಕ ಕೋಲ್ಕತ್ತಾ ತಂಡ 4ನೇ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿತ್ತು. ನಿನ್ನೆಯ ಪಂದ್ಯ ಮುಗಿದ ಬಳಿಕ ಕ್ರೀಡಾಂಗಣದ ಸುತ್ತ ನೆರೆದಿದ್ದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹೀಟ್ ಸ್ಟ್ರೋಕ್‌ನಿಂದಾಗಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ಶಾರೂಖ್ ಖಾನ್ ಅಹ್ಮದಾಬಾದ್‌ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ” ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.

“ಅಹ್ಮದಾಬಾದ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್‌ನ ಅಧಿಕ ತಾಪಮಾನದ ನಡುವೆ ನಟ ನಿರ್ಜಲೀಕರಣದಿಂದ ಬಳಲುತ್ತಿದ್ದರು. ಅವರ ಆರೋಗ್ಯ ಸ್ಥಿರವಾಗಿದ್ದರೂ ಕೂಡ ವೈದ್ಯರ ತಂಡ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಟಿ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಹ ಮಾಲೀಕರಾಗಿರುವ ಜೂಹಿ ಚಾವ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ನಟ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವಿವರಗಳನ್ನು ಆಸ್ಪತ್ರೆಯ ವೈದ್ಯರ ತಂಡ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...