ಗುಟ್ಕಾ ಜಾಹೀರಾತು ಪ್ರಕರಣ: ಬಾಲಿವುಡ್ ನಟರಾದ ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ನೋಟಿಸ್

Date:

ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡುವ ಸಂಬಂಧ ನಟರಾದ ಅಕ್ಷಯ್‌ ಕುಮಾರ್, ಶಾರೂಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಲಹಾಬಾದ್ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯ ವಿಚಾರಣೆ ನಡೆಯುತ್ತಿದ್ದು, ತ್ವರಿತ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೇಂದ್ರದ ವಕೀಲರು ಶುಕ್ರವಾರ ಹೈಕೋರ್ಟ್‌ಗೆ ತಿಳಿಸಿದರು. ಸಲ್ಲಿಕೆಯನ್ನು ಆಲಿಸಿದ ನಂತರ, ಪೀಠವು ವಿಚಾರಣೆಯನ್ನು ಮೇ 9, 2024 ಕ್ಕೆ ನಿಗದಿಪಡಿಸಿತು.

ನ್ಯಾಯಮೂರ್ತಿ ರಾಜೇಶ್ ಸಿಂಗ್ ಅವರಿದ್ದ ಪೀಠವು ಈ ಹಿಂದೆ ಅರ್ಜಿದಾರರ ಪ್ರಾತಿನಿಧ್ಯವನ್ನು ನಿರ್ಧರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು, ಸರ್ಕಾರದಿಂದ ಉನ್ನತ ಪ್ರಶಸ್ತಿಗಳನ್ನು ಸ್ವೀಕರಿಸಿರುವ ಪ್ರಖ್ಯಾತ ನಟರು ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸುಳ್ಳು ಆರೋಪ: ತಪ್ಪು ಯತ್ನಾಳರದ್ದೋ, ಕಾಂಗ್ರೆಸ್ಸಿನವರದ್ದೋ?

ಅಕ್ಟೋಬರ್ 22 ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ವಾದಿಸಿದರು. ಬಳಿಕ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತ್ತು.

ಶುಕ್ರವಾರ, ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಪಿ ಪಾಂಡೆ ಅವರು ಅಕ್ಷಯ್‌ ಕುಮಾರ್, ಶಾರೂಖ್ ಖಾನ್ ಮತ್ತು ಅಜಯ್‌ ದೇವಗನ್ ಅವರಿಗೆ ಕೇಂದ್ರವು ಶೋಕಾಸ್‌ ನೋಟಿಸ್ ಜಾರಿ ಮಾಡಿದೆ ಎಂದು ಹೈಕೋರ್ಟಿಗೆ ತಿಳಿಸಿದರು.

ಅಮಿತಾಬ್ ಬಚ್ಚನ್ ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್‌ ನೋಟಿಸ್ ಕಳುಹಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಅವರು ಈಗಾಗಲೇ ತಮ್ಮ ಒಪ್ಪಂದವನ್ನು ರದ್ದು ಗೊಳಿಸಿದ್ದರೂ ಸಹ ಅವರ ಜಾಹೀರಾತು ತೋರಿಸಲಾಗುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್...

ಸಿನಿ ಪ್ರಿಯರ ಮನಸ್ಸು ಗೆದ್ದ ಪೃಥ್ವಿರಾಜ್ ನಟನೆಯ ನೈಜ ಕಥೆಯಾಧರಿಸಿದ ‘ಆಡು ಜೀವಿತಂ’ ಸಿನಿಮಾ

ಬಹುನಿರೀಕ್ಷಿತ ಮಲಯಾಳಂ ಚಿತ್ರ 'ಆಡು ಜೀವಿತಂ' ಅಥವಾ 'ದಿ ಗೋಟ್‌ಲೈಫ್' ಮಾರ್ಚ್...

ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ...