ಮತ್ತೆ ಸ್ಯಾಂಡಲ್‌ವುಡ್‌ನತ್ತ ಶಿಲ್ಪಾ ಶೆಟ್ಟಿ

Date:

  • ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಶನ್‌‌ನಲ್ಲಿ ಬರುತ್ತಿರುವ ʼಕೇಡಿʼ
  • ಸಾಮಾಜಿಕ ಮಾಧ್ಯಮದಲ್ಲಿ ಶಿಲ್ಪಾ ಶೆಟ್ಟಿ ಪಾತ್ರದ ಫಸ್ಟ್‌‌ಲುಕ್ ಪೋಸ್ಟರ್ ಬಿಡುಗಡೆ

ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಬರೋಬ್ಬರಿ ಎರಡು ದಶಕಗಳ ಬಳಿಕ ಸ್ಯಾಂಡಲ್‌ವುಡ್‌ನತ್ತ ಮುಖ ಮಾಡಿದ್ದಾರೆ. ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಶನ್‌‌ನಲ್ಲಿ ಮೂಡಿ ಬರುತ್ತಿರುವ ʼಕೇಡಿʼ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಯುಗಾದಿ ಹಬ್ಬದ ಪ್ರಯುಕ್ತ ಬುಧವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರದ ಫಸ್ಟ್‌‌ಲುಕ್ ಪೋಸ್ಟರ್ ಬಿಡುಗಡೆ ಮಾಡಿರುವ ಪ್ರೇಮ್, ಸ್ಟಾರ್ ನಟಿಗೆ ಸ್ವಾಗತ ಕೋರಿದ್ದಾರೆ. ಚಿತ್ರದಲ್ಲಿ ಶಿಲ್ಪಾ ಶೆಟ್ಟಿ, ʼಸತ್ಯವತಿʼ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. ‘ಕೆಜಿಎಫ್’ ಚಿತ್ರದ ಮೂಲಕ ರವೀನಾ ಟಂಡನ್ ಸ್ಯಾಂಡಲ್‌‌ವುಡ್ ಪ್ರವೇಶಿಸಿದ್ದರು. ಅದೇ ರೀತಿ ಇದೀಗ ‘ಕೇಡಿ’ ಚಿತ್ರದಲ್ಲಿ ʼಸತ್ಯವತಿʼಯಾಗುವ ಮೂಲಕ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ.

1998ರಲ್ಲಿ ರವಿಚಂದ್ರನ್ ಮುಖ್ಯಭೂಮಿಕೆಯಲ್ಲಿ‌ ತೆರೆಕಂಡಿದ್ದ ‘ಪ್ರೀತ್ಸೋದ್ ತಪ್ಪಾ’ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸುವ ಮೂಲಕ ಶಿಲ್ಪಾ ಶೆಟ್ಟಿ ಮೊದಲ ಬಾರಿಗೆ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಇದೀಗ ‘ಕೇಡಿ’ ಚಿತ್ರದಲ್ಲಿ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಶಿಲ್ಪಾ ಶೆಟ್ಟಿ ಮತ್ತೆ ರವಿಚಂದ್ರನ್‌ಗೆ ಜೋಡಿಯಾಗಲಿದ್ದಾರೆಯೇ ಎಂಬ ಮಾತುಗಳು‌ ಕೂಡ ಕೇಳಿ ಬರುತ್ತಿವೆ.

ʼಕೆವಿಎನ್‌ ಪ್ರೊಡಕ್ಷನ್ಸ್‌ʼ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ʼಕೇಡಿʼ ಸಿನಿಮಾದ ಚಿತ್ರೀಕರಣ ಕಳೆದ ಫೆಬ್ರವರಿಯಲ್ಲಿ ಆರಂಭವಾಗಿದೆ. ಕ್ರೈಂ, ಆ್ಯಕ್ಷನ್ ಡ್ರಾಮಾ ಕಥಾಹಂದರವುಳ್ಳ ಈ ಚಿತ್ರದ ಟೈಟಲ್ ಟೀಸರ್ ಕೂಡ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಬಾಲಿವುಡ್‌ನ ಖ್ಯಾತ ನಟ ಸಂಜಯ್ ದತ್ ಕೂಡ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶ್‌ ಜೊತೆಗೆ ನರ್ತನ್‌ ಸಿನಿಮಾ ಸದ್ಯಕ್ಕಿಲ್ಲ

ಶಿವರಾಜ್‌ ಕುಮಾರ್‌ ನಟನೆಯ ʼಭೈರತಿ ರಣಗಲ್‌ʼ ಸಿನಿಮಾದಲ್ಲಿ ನರ್ತನ್‌ ಬ್ಯುಸಿ ಕೆಜಿಎಫ್‌-2 ಬಿಡುಗಡೆಯಾಗಿ...

ʼದಿ ಡೈರಿ ಆಫ್‌ ವೆಸ್ಟ್‌ ಬೆಂಗಾಲ್‌ʼ ಚಿತ್ರದ ನಿರ್ದೇಶಕನಿಗೆ ಕೋಲ್ಕತ್ತಾ ಪೊಲೀಸರಿಂದ ನೋಟಿಸ್‌

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುರಿಯಾಗಿಸಿ ಸಿನಿಮಾ ಮಾಡಿದ ಸನೋಜ್‌ ಟ್ರೈಲರ್‌ ಬಿಡುಗಡೆಯಾದ...

ಅದ್ದೂರಿಯಾಗಿ ಸೆಟ್ಟೇರಿದ ʼಭೈರತಿ ರಣಗಲ್‌ʼ

ಚಿತ್ರೀಕರಣಕ್ಕೆ ಚಾಲನೆ ನೀಡಿದ ಗೀತಾ ಶಿವರಾಜ್‌ ಕುಮಾರ್‌ ಜೂನ್‌ ಎರಡನೇ ವಾರದಿಂದ ಶೂಟಿಂಗ್‌...

2ನೇ ಮದುವೆಯಾದ ಆಶಿಷ್‌ ವಿದ್ಯಾರ್ಥಿ : ಮೊದಲ ಪತ್ನಿ ಅಸಮಾಧಾನ

ರೂಪಾಲಿ ಬರುವಾ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಶಿಷ್‌ ಎರಡನೇ ಮದುಯಾಗಿದ್ದಕ್ಕೆ ಟೀಕೆಗೆ...