ಸುದೀಪ್ ಸಿನಿಮಾ ಪ್ರದರ್ಶಿಸದಂತೆ ಚುನಾವಣಾ ಆಯೋಗಕ್ಕೆ ವಕೀಲರ ಮನವಿ

Date:

  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬೆಂಬಲ ಘೋಷಿಸಿರುವ ಸುದೀಪ್
  • ನಿಮಗೇಕೆ ರಾಜಕೀಯದ ಸಹವಾಸ ಎನ್ನುತ್ತಿರುವ ಅಭಿಮಾನಿಗಳು

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಬೆಂಬಲ ಘೋಷಿಸಿರುವ ನಟ ಸುದೀಪ್ ಅಭಿನಯದ ಸಿನಿಮಾ ಅಥವಾ ಕಿರುತೆರೆ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

- Advertisement -

ಸುದೀಪ್ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶಿವಮೊಗ್ಗ ಮೂಲದ ವಕೀಲ ಕೆ.ಪಿ ಶ್ರೀಪಾಲ, “ನಟ ಸುದೀಪ್ ಅವರು ಭಾರತೀಯ ಜನತಾ ಪಕ್ಷದ ಪರ ಸ್ಟಾರ್ ಪ್ರಚಾರಕರಾಗಿದ್ದಾರೆ. ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಅವರೇ ಘೋಷಿಸಿದ್ದಾರೆ‌. ಹೀಗಾಗಿ ಚುನಾವಣೆ ಮುಗಿಯುವ ವರೆಗೂ ಅವರು ನಟಿಸಿರುವ ಸಿನಿಮಾ, ರಿಯಾಲಿಟಿ ಶೋ ಮತ್ತು ಜಾಹೀರಾತುಗಳು ಚಿತ್ರಮಂದಿರ ಹಾಗೂ ಕಿರುತೆರೆಯಲ್ಲಿ ಪ್ರದರ್ಶನವಾಗದಂತೆ ಕ್ರಮ ಜರುಗಿಸಿ, ಇಲ್ಲವಾದರೆ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಬುಧವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಸುದೀಪ್, “ನಾನು ಚಿತ್ರರಂಗಕ್ಕೆ ಕಾಲಿಟ್ಟ ಆರಂಭದ ದಿನಗಳಲ್ಲಿ ಬೊಮ್ಮಾಯಿ ಅವರು ನನ್ನ ಕಷ್ಟಕ್ಕೆ ನೆರವಾಗಿದ್ದರು. ಹೀಗಾಗಿ ಅವರ ಪರ ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದ್ದೇನೆ. ಬೊಮ್ಮಾಯಿ ಮಾಮಾ ಯಾವ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಹೇಳುತ್ತಾರೊ ಅಂಥವರ ಪರ ಮಾತ್ರ ನಾನು ಪ್ರಚಾರಕ್ಕಿಳಿಯಲಿದ್ದೇನೆ. ಆದರೆ, ಬಿಜೆಪಿ ಸೇರುವುದಿಲ್ಲ” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ನಟ ಸುದೀಪ್‌‌ಗೆ ಅಪರಿಚಿತರಿಂದ ಬೆದರಿಕೆ

ಸುದೀಪ್, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಿಸುತ್ತಲೇ ಅವರ ಅಭಿಮಾನಿಗಳು ಮತ್ತು ನೆಟ್ಟಿಗರು, “ನಿಮಗೆ ರಾಜಕೀಯ ಬೇಕಾಗಿರಲಿಲ್ಲ. ಬೊಮ್ಮಾಯಿ ಪರ ಎನ್ನುತ್ತಲೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದೀರಿ. ಕಲಾವಿದ ಕಲೆಗೆ ಸೀಮಿತವಾಗಿದ್ದರೇ ಚೆಂದ” ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...