ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿದೆ. ಇವೆಲ್ಲವುದರ ನಡುವೆ ನಟಿ ರಮ್ಯಾ ಅವರಿಗೆ ನಟ ಶಿವ ರಾಜ್‌ಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್ ಬಳಿಕ ನಟಿ ವಿರುದ್ಧ ಡಿಬಾಸ್ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದರು. ಈ ಬಗ್ಗೆ ಈಗಾಗಲೇ ಎಫ್‌ಐಆರ್ ಕೂಡಾ ದಾಖಲಾಗಿದೆ. ಕೆಲವರು ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಈ ಬೆಳವಣಿಗೆ ನಡುವೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಶಿವ ರಾಜ್‌ಕುಮಾರ್, “ನಿಮ್ಮ ನಿಲುವು ಸರಿಯಿದೆ ರಮ್ಯಾ ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.
ನಿಮ್ಮ ನಿಲುವು ಸರಿಯಿದೆ @divyaspandana ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ. pic.twitter.com/89K1rpnlHj
— DrShivaRajkumar (@NimmaShivanna) July 29, 2025
“ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಈ ರೀತಿ ಮಾತನಾಡುವುದು ಸರಿಯಲ್ಲ, ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ” ಎಂದು ನಟ ಪೋಸ್ಟ್ ಮಾಡಿದ್ದಾರೆ.
“ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಶಿವ ರಾಜ್‌ಕುಮಾರ್ ಮತ್ತು ಪತ್ನಿ ಗೀತಾ ಶಿವ ರಾಜ್‌ಕುಮಾರ್ ಅವರು ಹೇಳಿದ್ದಾರೆ.
