ದರ್ಶನ್ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್: ರಮ್ಯಾ ಬೆಂಬಲಕ್ಕೆ ನಿಂತ ಶಿವ ರಾಜ್‌ಕುಮಾರ್

Date:

ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿದೆ. ಇವೆಲ್ಲವುದರ ನಡುವೆ ನಟಿ ರಮ್ಯಾ ಅವರಿಗೆ ನಟ ಶಿವ ರಾಜ್‌ಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

- Advertisement -

ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್‌ ಬಳಿಕ ನಟಿ ವಿರುದ್ಧ ಡಿಬಾಸ್‌ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ್ದರು. ಈ ಬಗ್ಗೆ ಈಗಾಗಲೇ ಎಫ್‌ಐಆರ್ ಕೂಡಾ ದಾಖಲಾಗಿದೆ. ಕೆಲವರು ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಈ ಬೆಳವಣಿಗೆ ನಡುವೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಶಿವ ರಾಜ್‌ಕುಮಾರ್, “ನಿಮ್ಮ ನಿಲುವು ಸರಿಯಿದೆ ರಮ್ಯಾ ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

“ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಈ ರೀತಿ ಮಾತನಾಡುವುದು ಸರಿಯಲ್ಲ, ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ” ಎಂದು ನಟ ಪೋಸ್ಟ್ ಮಾಡಿದ್ದಾರೆ.

“ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಶಿವ ರಾಜ್‌ಕುಮಾರ್ ಮತ್ತು ಪತ್ನಿ ಗೀತಾ ಶಿವ ರಾಜ್‌ಕುಮಾರ್ ಅವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...