ತಾವು ಅನಾರೋಗ್ಯಕ್ಕೆ ತುತ್ತಾಗಿರುವುದಾಗಿ ಹೇಳಿಕೊಂಡಿದ್ದ ನಟ ಶಿವರಾಜ್ಕುಮಾರ್, ತಮ್ಮ ಆರೋಗ್ಯದಲ್ಲಿ ಏನಾಗಿದೆ ಎಂಬುದರ ಬಗ್ಗೆ ಹೇಳಿಕೊಂಡಿರಲಿಲ್ಲ. ಅವರು ಇತ್ತೀಚೆಗೆ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಮಂಗಳವಾರ ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಮೆರಿಕದ ವೈದ್ಯರು ತಿಳಿಸಿದ್ದಾರೆ.
ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಿವರಾಜ್ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ಶಿವರಾಜ್ಕುಮಾರ್ ಅವರಿಗೆ ಏನಾಗಿತ್ತು ಎಂಬುದರ ನಗ್ಗೆ ವೈದ್ಯರು ಮಾಹಿತಿ ಹಂಚಕೊಂಡಿದ್ದಾರೆ. ಶಿವರಾಜ್ಕುಮಾರ್ ಮೂತ್ರಪಿಂಡದ ಕ್ಯಾನ್ಸರ್ಗೆ ತುತ್ತಾಗಿದ್ದರು ಎಂಬುದು ಇದೀಗ ಗೊತ್ತಾಗಿದೆ.
ಶಿವರಾಜ್ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಡಾ. ಮುರುಗೇಶ್ ಮನೋಹರನ್, “ಕ್ಯಾನ್ಸರ್ ತಗುಲಿದ್ದ ಮೂತ್ರ ಪಿಂಡವನ್ನ ತೆಗೆಯಲಾಗಿದೆ. ಕರುಳನ್ನು ಬಳಸಿ ಕೃತಕ ಮೂತ್ರ ಪಿಂಡವನ್ನು ಅಳವಡಿಸಲಾಗಿದೆ. ಶಿವರಾಜ್ಕುಮಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.
‘ಶಿವರಾಜ್ಕುಮಾರ್ ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿದ್ದಾರೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಉತ್ತಮ ಆರೈಕೆ ನೀಡುತ್ತಿದ್ದಾರೆ. ಶಿವರಾಜ್ಕುಮಾರ್ಗಾಗಿ ಎಲ್ಲರೂ ತೋರಿಸಿದ ಬೆಂಬಲ, ಪ್ರೀತಿ, ಪ್ರಾರ್ಥನೆಗೆ ಹೃತ್ತೂರ್ವಕ ಧನ್ಯವಾದಗಳು” ಎಂದು ಗೀತಾ ಶಿವರಾಜ್ಕುಮಾರ್ ಹೇಳಿದ್ದಾರೆ.