ತಮಿಳು ನಟ ವಿಶಾಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅನಾರೋಗ್ಯದಿಂದಾಗಿ ವೇದಿಕೆಯಲ್ಲೆ ಕುಸಿದು ಬಿದ್ದ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.
ಮಿಸ್ ಕೂವಾಗಮ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ವಿಶಾಲ್ ತೆರಳಿದ್ದರು. ವೇದಿಕೆಯಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಹಠಾತ್ತನೆ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ.
ತಕ್ಷಣ ಸ್ಥಳದಲ್ಲಿದ್ದ ಮಾಜಿ ಸಚಿವ ಕೆ. ಪೊನ್ಮುಡಿ ಹಾಗೂ ಕಾರ್ಯಕ್ರಮ ಆಯೋಜಕರು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ.
ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆ ಹಲವಾರು ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಅಭಿಮಾನಿಗಳು ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಅವರನ್ನು ಒತ್ತಾಯಿಸುತ್ತಿದ್ದಾರೆ. ಇದೀಗ ಈ ಘಟನೆಯಿಂದಾಗಿ ವಿಶಾಲ್ ಆರೋಗ್ಯದ ಬಗ್ಗೆ ಮತ್ತಷ್ಟು ವದಂತಿಗಳು ಶುರುವಾಗಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್
ವಿಶಾಲ್ ಅವರ ಮ್ಯಾನೇಜರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಹಾರ ಸೇವಿಸದ ಕಾರಣ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದಿದ್ದಾರೆ. ಇನ್ನೂ ಈ ವರ್ಷ ಜನವರಿಯಲ್ಲಿ ಜ್ವರದಿಂದ ಬಳಲಿ ಚೇತರಿಸಿಕೊಂಡಿದ್ದರು.
ಜನವರಿಯಲ್ಲಿ ‘ಮದಗಜರಾಜ’ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾಗ, ಅವರ ಮಾತು ತೊದಲುತ್ತಿತ್ತು. ಅಲ್ಲದೇ ಕೈ ಸಹ ನಡುಗುತ್ತಿತ್ತು.
கூட்டத்தில் மயங்கி விழுந்த விஷால்… விழுப்புரத்தில் பரபரப்பு#vishal | #thanthicinema | #villupuram pic.twitter.com/DgrXSOv9FU
— Thanthi TV (@ThanthiTV) May 11, 2025