ಅನಾರೋಗ್ಯದಿಂದ ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್

Date:

ತಮಿಳು ನಟ ವಿಶಾಲ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅನಾರೋಗ್ಯದಿಂದಾಗಿ ವೇದಿಕೆಯಲ್ಲೆ ಕುಸಿದು ಬಿದ್ದ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.

- Advertisement -

ಮಿಸ್ ಕೂವಾಗಮ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ವಿಶಾಲ್‌ ತೆರಳಿದ್ದರು. ವೇದಿಕೆಯಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಹಠಾತ್ತನೆ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತಕ್ಷಣ ಸ್ಥಳದಲ್ಲಿದ್ದ ಮಾಜಿ ಸಚಿವ ಕೆ. ಪೊನ್ಮುಡಿ ಹಾಗೂ ಕಾರ್ಯಕ್ರಮ ಆಯೋಜಕರು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ.

ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆ ಹಲವಾರು ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಅಭಿಮಾನಿಗಳು ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಅವರನ್ನು ಒತ್ತಾಯಿಸುತ್ತಿದ್ದಾರೆ. ಇದೀಗ ಈ ಘಟನೆಯಿಂದಾಗಿ ವಿಶಾಲ್ ಆರೋಗ್ಯದ ಬಗ್ಗೆ ಮತ್ತಷ್ಟು ವದಂತಿಗಳು ಶುರುವಾಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ವಿಶಾಲ್ ಅವರ ಮ್ಯಾನೇಜರ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಹಾರ ಸೇವಿಸದ ಕಾರಣ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದಿದ್ದಾರೆ. ಇನ್ನೂ ಈ ವರ್ಷ ಜನವರಿಯಲ್ಲಿ ಜ್ವರದಿಂದ ಬಳಲಿ ಚೇತರಿಸಿಕೊಂಡಿದ್ದರು.

ಜನವರಿಯಲ್ಲಿ ‘ಮದಗಜರಾಜ’ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾಗ, ಅವರ ಮಾತು ತೊದಲುತ್ತಿತ್ತು. ಅಲ್ಲದೇ ಕೈ ಸಹ ನಡುಗುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...