ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.
ಸಭೆಯ ಬಳಿಕ ಮಾಧ್ಯಮಗೋಷ್ಠಿಯನ್ನು ನಡೆಸಿದ ಫಿಲ್ಮ್ ಚೇಂಬರ್ ತಾತ್ಕಾಲಿಕವಾಗಿ ಸೋನು ನಿಗಮ್ ಅವರಿಗೆ ಕನ್ನಡ ಚಲನಚಿತ್ರದಿಂದ ನಿರ್ಬಂಧ ಹೇರಲು ನಿರ್ಧರಿಸಿದೆ ಎಂದು ಹೇಳಿದೆ.
ಇದನ್ನು ಓದಿದ್ದೀರಾ? ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ಉಗ್ರರ ದಾಳಿ ನಡೆಯಿತು: ವಿವಾದವಾದ ಸೋನು ನಿಗಮ್ ಮಾತು
‘ಕನ್ನಡ ಕನ್ನಡ ಎಂದು ಹೇಳಿದ್ದರಿಂದಲೇ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಸೋನು ನಿಗಮ್ ಹೇಳಿದ್ದರು. ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸೋನು ನಿಗಮ್ ವಿರುದ್ಧ ಇಂದು ಪ್ರತಿಭಟನೆ ನಡೆಸಿದೆ.
ಕ್ಷಮೆ ಕೇಳುವವರೆಗೂ ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಲಾಗುವುದು ಎಂದು ಹೇಳಿದೆ. ಸೋನು ನಿಗಮ್ ಈವರೆಗೂ ಕ್ಷಮೆ ಕೇಳಿಲ್ಲ. ಬದಲಾಗಿ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
