ಸೃಜನ್ ಲೋಕೇಶ್ ಚೊಚ್ಚಲ ನಿರ್ದೇಶಿತ ʼGSTʼ ಚಿತ್ರ ಸದ್ಯದಲ್ಲೇ ತೆರೆಗೆ

Date:

ನಟ, ನಿರ್ಮಾಪಕ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ.

- Advertisement -

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಈ ಚಿತ್ರ ಈಗಾಗಲೇ ಸೆನ್ಸಾರ್‌ ಪ್ರಕ್ರಿಯೆ ಮುಗಿಸಿಕೊಂಡಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

GST ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೃಜನ್‌ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ಜೊತಯಾಗಿದ್ದಾರೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಗಿರಿಜಾ ಲೋಕೇಶ್ ಹಾಗೂ ಮಗ‌ ಸುಕೃತ್‌ಗೆ ಆಕ್ಷನ್ ಕಟ್ ಹೇಳಿರುವುದು ಚಿತ್ರದ ವಿಶೇಷತೆಗಳಲ್ಲೊಂದು. ಮನೋರಂಜನೆಯೇ ಪ್ರಧಾನವಾಗಿರುವ GST ಚಿತ್ರಕ್ಕೆ ʼಘೋಸ್ಟ್ ಇನ್ ಟ್ರಬಲ್ʼ ಎಂಬ ಅಡಿಬರಹವಿದೆ.

ಪ್ರಮೋದ್ ಶೆಟ್ಟಿ, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಸೇರಿದಂತೆ ಹಲವು ಹಿರಿಯ ಹಾಗೂ ಪರಿಚಿತ ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿದ್ದು, ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಚಿತ್ರದ ಸಹ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಇದನ್ನೂ ಓದಿ: ಸೆನ್ಸಾರ್ ಮಂಡಳಿ ಅದುಮಿಟ್ಟಿರುವ ವೆಟ್ರಿಮಾರನ್ ‘ಮಾನುಷಿ’ ಚಿತ್ರದಲ್ಲೇನಿದೆ, ಏನಿದು ವಿವಾದ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...